ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ.65% : ಸಿಎಂ ಬೊಮ್ಮಾಯಿ
ಬೆಂಗಳೂರು: ರಕ್ಷಣಾ ವಯಲದಲ್ಲಿ ಬಂಧನ ಎನ್ನುವುದು ರಕ್ಷಣಾ ಇಲಾಖೆ ಮತ್ತು ಸಾರ್ವಜನಿಕ ಸಂಸ್ಥೆಗಳ ಮಧ್ಯೆ ಇರುವ ದೀರ್ಘಕಾಲದ ಸಂಬಂಧ ರಾಷ್ಟ್ರದ ರಕ್ಷಣಾ ವಲಯ ಬೇಡಿಕೆಯ ಪೂರೈಕೆಯಲ್ಲಿ ರಾಜ್ಯದ ಪಾಲು ಶೇ65% ರಷ್ಟಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಅವರು ಇಂದು ಏರೋ ಇಂಡಿಯಾ 2023 ರ ಬಂಧನ್ – ಒಪ್ಪಂದಗಳಿಗೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು.
ರಕ್ಷಣೆ ಮತ್ತು ಏರೋಸ್ಪೇಸ್ ವಲಯವು ಸ್ಥಾಪಿತ ಕ್ಷೇತ್ರವಾಗಿದ್ದು, ಇದರಲ್ಲಿ ಅತ್ಯಂತ ಪರಿಣಿತರು ಮಾತ್ರ ಕೆಲಸವನ್ನು ಸಂಪೂರ್ಣಗೊಳಿಸಬಲ್ಲರು. ಪ್ರಧಾನಿ ನರೇಂದ್ರ ಮೋದಿ ಅವರು ಆಶೀರ್ವಾದೊಂದಿಗೆ ಹಾಗೂ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರ ನೇತೃತ್ವದಲ್ಲಿ ರಕ್ಷಣಾ ವಲಯವು ತೆರೆದುಕೊಂಡಿದೆ. ನಮ್ಮ ದೇಶದ ರಕ್ಷಣಾ ವ್ಯವಸ್ಥೆ ಬೇಡಿಕೆಯ ಶೇ80 ರಷ್ಟನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದ ಕಾಲವೊಂದಿತ್ತು. ಆದರೆ ಈಗ ಮಾನ್ಯ ಪ್ರಧಾನಿಗಳ ಮೇಕ್ ಇನ್ ಇಂಡಿಯಾ ಪರಿಕಲ್ಪನೆ ಅಡಿಯಲ್ಲಿ ದೇಶದಲ್ಲಿಯೇ ತಯಾರಿಕೆ ಮಾಡುತ್ತಿದ್ದೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಮ್ಮ ಉತ್ಪಾದನೆ ಸಾಮರ್ಥ್ಯ ಅಂದುಕೊಂಡದ್ದಕ್ಕಿಂತ ಹೆಚ್ಚಿದೆ:
ನಮ್ಮ ದೇಶದ ರಕ್ಷಣಾ ವಲಯದ ಉತ್ಪಾದನಾ ಸಾಮರ್ಥ್ಯ ನಾವು ಅಂದುಕೊಂಡಿದ್ದಕ್ಕಿಂತ ಹೆಚ್ಚಿದೆ ಮತ್ತು ನಮ್ಮ ದೇಶದ ಉತ್ಪಾದನಾ ಸಂಸ್ಥೆಗಳು ನಮ್ಮ ಬೇಡಿಕೆಯನ್ನು ಪೂರೈಸುವ ಎಲ್ಲ ಸಾಮರ್ಥ್ಯ ಹೊಂದಿದೆ. ಎಂಎಸ್ಎಂಇ ಕೂಡ ಇದನ್ನು ಉತ್ಪಾದನೆ ಮಾಡಬಲ್ಲದಾಗಿದೆ. ಸಧ್ಯದ ಪರಿಸ್ಥಿತಿಯಲ್ಲಿ ರಕ್ಷಣಾ ವಸ್ತುಗಳ ಉತ್ಪಾದನಾ ಸಂಸ್ಥೆಗಳು ಅತ್ಯುನ್ನತ ತಂತ್ರಜ್ಞಾನವನ್ನು ಹೊಂದಿದ್ದು, ಅತ್ಯಂತ ದಕ್ಷವಾಗಿ ಕಾರ್ಯನಿರ್ವಹಿಸಬಲ್ಲದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ರಕ್ಷಣಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿವೆ:
ಉತ್ಪಾದನಾ ವಲಯದಲ್ಲಿ ಡೊಮೇನ್ ಬದಲಾವಣೆಯಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಿದೆ. ಆದ್ದರಿಂದ ನಾವು ಮಹತ್ವಾಕಾಂಕ್ಷೆಯಿಂದ ವೈಜ್ಞಾನಿಕವಾಗಿ ಯೋಚನೆ ಮಾಡಬೇಕಿದೆ. ಈ ಎಲ್ಲ ವಿಷಯಗಳನ್ನು ಬಂಧನ ಹೆಸರಲ್ಲಿ ನಾವು ಒಟ್ಟಿಗೆ ತಂದಿದ್ದೀವಿ. ಇಂದು ಸಹಿ ಆಗಿರುವ ಎಲ್ಲ ಒಪ್ಪಂದಗಳು ಭವಿಷ್ಯದ ಅಗತ್ಯ, ಬೆಳವಣಿಗೆ ಮತ್ತು ಸಾಮರ್ಥ್ಯ ವೃದ್ಧಿಗೆ ಸಾಕ್ಷಿ ಆಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
32 ಒಪ್ಪಂದಗಳಿಗೆ ರಾಜ್ಯ ಸಹಿ:
ಬೆಂಗಳೂರಿನಲ್ಲಿ ಏರೋ ಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತು ಅದರ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ನನ್ನೆಲ್ಲಾ ಅಧಿಕಾರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ರಾಷ್ಟ್ರದ ಒಟ್ಟು ರಕ್ಷಣಾ ಉತ್ಪಾದನೆಯಲ್ಲಿ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಮತ್ತು ಖಾಸಗೀ ಸಂಸ್ಥೆಗಳು 65% ಪಾಲನ್ನು ಪೂರೈಸುತ್ತಿದೆ. 2900 ಕೋಟಿಗೂ ಹೆಚ್ಚು ಮೌಲ್ಯದ ಹೂಡಿಕೆಯ 32 ಒಪ್ಪಂದಗಳಿಗೆ ರಾಜ್ಯದ ಸಾರ್ವಜನಿಕ ವಲಯದ ಉದ್ಯಮಗಳು ಸಹಿ ಹಾಕಿದೆ. ಈ ಏರೋ ಇಂಡಿಯಾ ಪ್ರದರ್ಶನ “ಟಾಕ್ ಆಫ್ ದಿ ಟೌನ್” ಆಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಖಾತೆ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸರ್ಕಾರದ ರಕ್ಷಣಾ ಕಾರ್ಯದರ್ಶಿ ಶ್ರೀ ಗಿರಿಧರ್ ಅರಮಾನೆ, ಭಾರತೀಯ ಸಶಸ್ತ್ರ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್, ಏರ್ ಛೀಫ್ ಮಾರ್ಷಲ್ ವಿ.ಆರ್.ಚೌಧರಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw