ಗೂಡ್ಸ್ ವಾಹನದಲ್ಲಿ ಮೃತದೇಹ ತಂದು ರಸ್ತೆ ಬದಿ ಎಸೆದು ಹೋದ ಇಬ್ಬರು ವ್ಯಕ್ತಿಗಳು!
ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ.
ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ.
ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw