ಮೊಬೈಲ್ ಕಳ್ಳತನದ ಆರೋಪ ಹೊರಿಸಿ ಸಿಮೆಂಟ್ ಇಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಹತ್ಯೆ!
ಚಿಕ್ಕಮಗಳೂರು: ಮೊಬೈಲ್ ಕಳ್ಳತನ ಮಾಡಿದ ವ್ಯಕ್ತಿಯನ್ನ ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಬಳಿ ನಡೆದಿದೆ.
ಮೃತನನ್ನ ಕಡೂರು ತಾಲೂಕಿನ ಮಲ್ಲೇದೇವರಹಳ್ಳಿ ಗ್ರಾಮದ 60 ವರ್ಷದ ಮೋಹನ್ ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಡಿ ದರ್ಜೆ ನೌಕರ ಕೆಂಚಪ್ಪ ಆರೋಪಿಯಾಗಿದ್ದು, ಇದೇ 14ರ ಮಂಗಳವಾರ ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ಮರವಂಜಿ ವೃತ್ತದಲ್ಲಿ ಮೋಹನ ಕುಮಾರ್ ಕೆಂಚಪ್ಪನ ಮೊಬೈಲ್ ಮತ್ತು ಹಣ ಕಸಿದುಕೊಳ್ಳಲು ಯತ್ನಿಸಿದಾಗ ಕೆಂಚಪ್ಪ ಆತನ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆಯಲ್ಲಿ ಜಜ್ಜಿ ಪರಾರಿಯಾಗಿದ್ದಾನೆ.
ಬೆಳಿಗ್ಗೆ ಚಿಂತಾಜನಕ ಸ್ಥಿತಿಯಲ್ಲಿ ನರಳುತ್ತಿದ್ದ ವ್ಯಕ್ತಿಯನ್ನ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆತನನ್ನು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ಯುವ ವೇಳೆ ಆತ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ಮೃತನ ಸಂಬಂಧಿ ರತ್ನಮ್ಮ ಎಂಬುವರು ಕಡೂರು ಪೆÇಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಕಡೂರು ಪೆÇಲೀಸರು ಸ್ಥಳದಲ್ಲಿರುವ ಸಿಸಿ ಟಿವಿ ಫೂಟೇಜ್ ಗಳನ್ನ ಪರಿಶೀಲಿಸಿ ಆರೋಪಿ ಕೆಂಚಪ್ಪನನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕೊಲೆ ನಡೆದ ಕೆಲವೇ ಗಂಟೆಯಲ್ಲಿ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿ.ಎಸ್.ಐ. ರಮ್ಯಾ, ಸಿಬ್ಬಂದಿಗಳಾದ ವೇದಮೂರ್ತಿ, ಕೃಷ್ಣಮೂರ್ತಿ ಹಾಗೂ ಉಮೇಶ್ ಇದ್ದರು.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw