ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ನಿಧನ - Mahanayaka
8:53 AM Wednesday 11 - December 2024

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ನಿಧನ

ramesh kumar wife vijayamma
17/02/2023

ಬೆಂಗಳೂರು:  ಕರ್ನಾಟಕದ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದಾಗಿ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

69 ವರ್ಷ ವಯಸ್ಸಿನ ವಿಜಯಮ್ಮನವರು ಕಳೆದ 2 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆಯಷ್ಟೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಇಂದು ಮಧ್ಯಾಹ್ನ ಅವರು ನಿಧನರಾಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಮೃತರು ಪತಿ, ಓರ್ವಳು ಮಗಳು, ಓರ್ವ ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ