ಕಾಂಗ್ರೆಸ್ ನವರಿಗೆ ಚೆಂಡುಹೂವು ಇನ್ನು ಪರ್ಮನೆಂಟ್: ಸಿ.ಟಿ.ರವಿ ವ್ಯಂಗ್ಯ
ಚಿಕ್ಕಮಗಳೂರು: ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ನಾಯಕರು ಕಿವಿಗೆ ಚೆಂಡುಹೂವು ಮುಡಿದು ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ನವರಿಗೆ ಚೆಂಡುಹೂವು ಇನ್ನೂ ಪರ್ಮನೆಂಟ್ ಎಂದು ಹೇಳಿರುವ ಸಿ.ಟಿ.ರವಿ, ಕಾಂಗ್ರೆಸ್ ನಾಯಕರ ಚೆಂಡುಹೂವು ಪ್ರತಿಭಟನೆಯನ್ನು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ ನವರು ಕಿವಿಗೆ ಚೆಂಡುಹೂವು ಇಟ್ಟುಕೊಂಡು ಓಡಾಡಬೇಕು. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ ಕಮಲವೇ ಮತ್ತೆ ಅರಳುವುದು, ಜನರು ಕಾಂಗ್ರೆಸ್ ಗೆ ಚೆಂಡುಹೂವು ಹಿಡಿಸುವ ಬದಲು, ನಾವೇ ಇಟ್ಟುಕೊಳ್ಳೋಣ ಎಂದು ಕಿವಿಗೆ ಇಟ್ಟುಕೊಂಡಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಮತ್ತೆ ಬಿಜೆಪಿಯೆ ಗೆಲ್ಲುವುದು ಎಂದು ಕಾಂಗ್ರೆಸ್ ಪರೋಕ್ಷವಾಗಿ ಒಪ್ಪಿಕೊಂಡಿದೆ. ಚೆಂಡುಹೂವುನ್ನು ಇಟ್ಟುಕೊಂಡು ರಾಜ್ಯದ ಜನತೆಯ ಹಿತವನ್ನು ಬಯಸಿದ್ದಾರೆ. ರಾಜ್ಯದ ಹಿತ ಬಿಜೆಪಿಯ ಗೆಲುವಿನ ಜೊತೆಗೆಯಿದೆ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ರಾಜ್ಯದ ಹಿತವನ್ನ ಕಾಂಗ್ರೆಸ್ ಬಯಸಿದ್ದಕ್ಕೆ, ಬಿಜೆಪಿಯ ಗೆಲುವನ್ನು ಬಯಸಿದ್ದಕ್ಕೆ ಕಾಂಗ್ರೆಸ್ ಗೆ ಧನ್ಯವಾದ ಹೇಳುತ್ತೇನೆ ಎಂದು ಅವರು ಹೇಳಿದ್ದಾರೆ.
ಸರ್ವಸ್ಪರ್ಶಿ, ಸರ್ವವ್ಯಾಪಿ ಬಜೆಟ್ :
ಇದೇ ವೇಳೆ ಸಿಎಂ ಬೊಮ್ಮಾಯಿ ಮಂಡಿಸಿದ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಸಿ.ಟಿ.ರವಿ, ಬೊಮ್ಮಾಯಿ ಬಜೆಟ್ ಆಶಯ ಬಿಂಬಿಸುವ ಬಜೆಟ್ ಸರ್ವಸ್ಪರ್ಶಿ, ಸರ್ವವ್ಯಾಪಿಯಾಗಿರುವ ಬಜೆಟ್ ಎಂದರು.
ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಗೃಹಿಣಿ ಶಕ್ತಿ ಯೋಜನೆ, ಮೂಲಸೌಲಭ್ಯ, ನೀರಾವರಿಗೆ ಕೊಟ್ಟಿರುವ ವಿಶೇಷ ಯೋಜನೆ ಜನರಲ್ಲಿ ಹೊಸ ಭರವಸೆ ಮೂಡಿಸಿದೆ ಇದು ಅಭಿವೃದ್ಧಿ ಕರ್ನಾಟಕ ಆಶಯದ ಬಜೆಟ್ ಎಂದರು.
ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ಮಾಡಿ ಅಂತ ಕೇಳಿದ್ದೆ ಅದರಲ್ಲಿರುವ ತಾಂತ್ರಿಕ ತೊಡಕಿನ ಬಗ್ಗೆ ನನಗೆ ತಿಳಿಸಿದ್ದಾರೆ, ತಾಂತ್ರಿಕ ತೊಡಕು ನಿವಾರಿಸಿ ದತ್ತಪೀಠ ಅಭಿವೃದ್ಧಿ ಪ್ರಾಧಿಕಾರ ಮಾಡಿಸ್ತೇವೆ ಎಂದು ಸಿ.ಟಿ.ರವಿ ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw