ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಿಸದೇ ಬಜೆಟ್ ನಲ್ಲಿ ಮೋಸ: ಪದ್ಮರಾಜ್ ಆರ್. - Mahanayaka

ನಾರಾಯಣಗುರು ಅಭಿವೃದ್ಧಿ ನಿಗಮ ಘೋಷಿಸದೇ ಬಜೆಟ್ ನಲ್ಲಿ ಮೋಸ: ಪದ್ಮರಾಜ್ ಆರ್.

narayanaguru
18/02/2023

ನಾರಾಯಣಗುರು ಅಭಿವೃದ್ಧಿ ನಿಗಮವನ್ನು ಬಜೆಟ್‌ ನಲ್ಲಿ ಘೋಷಣೆ ಮಾಡದೇ ಸಮುದಾಯಕ್ಕೆ ಮುಖ್ಯಮಂತ್ರಿ ಸಹಿತ ಸಚಿವರು ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು  ಶ್ರೀ ಗುರುಬೆಳದಿಂಗಳು ಚಾರಿಟೇಬಲ್ ಟ್ರಸ್ಟ್‌ ನ ಅಧ್ಯಕ್ಷ ಪದ್ಮರಾಜ್ ಆರ್. ಆರೋಪಿಸಿದ್ದಾರೆ.


Provided by

ಮಂಗಳೂರು ಮಗರದ ಖಾಸಗಿ ಹೊಟೇಲ್ ‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣಗುರು ನಿಗಮ ಸ್ಥಾಪನೆ ಮಾಡಬೇಕು ಎಂಬುದು ನಾಲ್ಕು ವರ್ಷಗಳಿಂದ ನಾವು ಹೋರಾಟ ಮಾಡಿಕೊಂಡು ಬಂದಿದ್ದೆವು. ಆದರೆ ಸರಕಾರ ಮುತುವರ್ಜಿ ವಹಿಸದಿದ್ದುದರಿಂದ ಜನವರಿಯಲ್ಲಿ ಸಮಾವೇಶ ಮಾಡಲು ತಯಾರಿ ಮಾಡಿದೆವು. ಆಗ ನಿಗಮವನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗುತ್ತದೆ ಸಚಿವರು ಭರವಸೆ ನೀಡಿದ್ದರಿಂದ ಸಮಾವೇಶ ಕೈಬಿಟ್ಟಿದ್ದೆವು.

ಜ.5ರಂದು ಸಚಿವ ಸುನಿಲ್ ಕುಮಾರ್ ಮೂಲಕ ಸಿಎಂಗೆ ಮನವಿ ನೀಡಲಾಯಿತು. ನಿಗಮ ಘೋಷಣೆ ಮಾಡುತ್ತೇವೆ ಎಂದು ಸಿಎಂ ಭರವಸೆ ನೀಡಿದ್ದರು. ಆದರೆ ಇಂದಿನ ಬಜೆಟ್‌ನಲ್ಲಿ ನಿಗಮ ಘೋಷಣೆ ಮಾಡದೆ ಅನ್ಯಾಯ ಎಸಗಿದ್ದಾರೆ ಎಂದರು.


Provided by

18 ವರ್ಷಗಳ ಹಿಂದೆ ಶೇಂದಿ ನಿಷೇಧ ಜಾರಿಯಾದಾಗಲೇ ನಿಗಮ ಆಗಬೇಕಿತ್ತು. ಮುಂದಿನ ಬಜೆಟ್ ನಲ್ಲಿ ನಿಗಮ ಘೋಷಿಸುವುದಾಗಿ ಸಿಎಂ ತಿಳಿಸಿದ್ದರು. ಅವಾಗ ಬಿಜೆಪಿಯ ರಾಜ್ಯಾಧ್ಯಕ್ಷರು, ಸಚಿವ ಸುನಿಲ್ ಕುಮಾರ್ ಕೂಡ ಇದ್ದರು. ಆದರೆ ಇಂದು ಬೊಮ್ಮಾಯಿ ಮಾತು ತಪ್ಪಿದ್ದಾರೆ. ಇತ್ತೀಚೆಗೆ ಪ್ರಣವ ಪಾದಯಾತ್ರೆ ಸಮಾರೋಪದಲ್ಲಿ ಕೂಡ ನಿಗಮ ಮಾಡುತ್ತೇವೆ ಎಂದು ಸಚಿವರು ಭರವಸೆ ನೀಡಿದ್ದರು. ಈ ಬಜೆಟ್‌ನಲ್ಲಿ ಘೋಷಣೆಯಾಗದ ನಿಗಮವು ಮುಂದೆ ಮರೀಚಿಕೆಯಾಗಿದೆ. ಬಜೆಟ್ ಘೋಷಣೆ ಮಾಡಿದ್ದರೆ ಸಾಕಿತ್ತು. ಮುಂದೆ ಯಾವ ಸರಕಾರ ಬಂದರೂ ನಿಗಮ ಅಧಿಕೃತವಾಗಿ ಇರುತ್ತಿತ್ತು ಎಂದು ನಾರಾಯಣ ಗುರು ವಿಚಾರ ವೇದಿಕೆಯ ರಾಜಾಧ್ಯಕ್ಷ ಸತ್ಯಜಿತ್ ಸುರತ್ಕಲ್‌ ಕಿಡಿಕಾರಿದ್ದಾರೆ. ಅವರು ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ನಾರಾಯಣ ಗುರು ವಸತಿ ಶಾಲೆ ಎಲ್ಲ ಸಮಾಜಕ್ಕೆ ಸಂಬಂಧಿಸಿದ್ದಾಗಿದೆ. ಇದರಿಂದ ಬಿಲ್ಲವ ಸಮಾಜದ ಬದುಕಿನ ಏಳಿಗೆ ಆಗಲ್ಲ. ಶೈಕ್ಷಣಿಕ, ಆರ್ಥಿಕ ಏಳಿಗೆಗೆ ನಿಗಮ ಅಗತ್ಯವಾಗಿತ್ತು. 15 ಜಿಲ್ಲೆಗಳಲ್ಲಿ ನಾರಾಯಣ ಗುರು ವಿಚಾರ ವೇದಿಕೆಯ ಸಂಘಟನೆ ಇದೆ. ರಾಜ್ಯಾದ್ಯಂತ ಹೋರಾಟದ ಶಕ್ತಿ ಇದೆ. ಹಾಗಾಗಿ ಹೋರಾಟ ಮುಂದುವರಿಸುತ್ತೇವೆ. ಅದಕ್ಕಿಂತ ಮೊದಲು ಸರಕಾರದಿಂದ ಆದ ಲೋಪ ಸರಿಪಡಿಸಬೇಕು. ಫೆ.24ರವರೆಗೆ ನಡೆಯುವ ಅಧಿವೇಶನ ದಲ್ಲಿ ನಿಗಮ ಘೋಷಿಸಿ 500 ಕೋ.ರೂ. ಮೀಸಲಿಡಬೇಕು. ಇಲ್ಲದಿದ್ದರೆ ಸರಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂಗಾರಪ್ಪ ಮತ್ತು ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರಿಡಬೇಕು. ಅಲ್ಲದೆ ಸಮುದಾಯದ ಎಲ್ಲಾ ಬೇಡಿಕೆಗಳಿಗೆ ಮನ್ನಣೆ ನೀಡಬೇಕು ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ