ಉಡುಪಿ: ಜೆಡಿಎಸ್ ಪಕ್ಷ ಸೇರ್ಪಡೆಗೊಂಡ ಸಮಾಜ ಸೇವಕರು
ಉಡುಪಿ: ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿಯ ಸಮಾಜ ಸೇವಕ ಜಯರಾಜ ಕಟಪಾಡಿ ಮತ್ತು ಇತರ ಸಂಗಡಿಗರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.
ತಂಡದ ಸದಸ್ಯರಿಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿಯವರು ಶಾಲು ಹೊದಿಸಿ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು ಮತ್ತು ಸಂಘಟನೆಗೆ ಒತ್ತು ನೀಡುವಂತೆ ಕರೆ ನೀಡಿದರು.
ಈ ಸಂದರ್ಭ ರಾಜ್ಯ ಕಾರ್ಯದರ್ಶಿಗಳಾದ ಸುಧಾಕರ ಶೆಟ್ಟಿ, ಗಂಗಾಧರ ಬಿರ್ತಿ ಮತ್ತು ಮನ್ಸೂರ್ ಇಬ್ರಾಹಿಂ,ಜಿಲ್ಲಾ ಕಾರ್ಯಾಧ್ಯಕ್ಷರಾದ ವಾಸುದೇವ ರಾವ್, ನಾಯಕರುಗಳಾದ ಸಂಕಪ್ಪ ಎ,ಬಾಲಕೃಷ್ಣ ಆಚಾರ್ಯ ಕಬ್ಬೆಟ್ಟು, ಇಕ್ಬಾಲ್ ಅತ್ರಾಡಿ, ಸಂಜಯ್ ಕುಮಾರ್,ವೆಂಕಟೇಶ್ ಎಂಟಿ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw