ತಾಯಿ ಗದರಿದರು ಎಂದು ದುಡುಕಿನ ನಿರ್ಧಾರ ತೆಗೆದುಕೊಂಡ ಬಾಲಕಿ ಸಾವು
ಸಾವಿಗೆ ಶರಣಾಗಲು ಯತ್ನಿಸಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಹೃದಯ ಹೃದ್ರಾವಕ ಘಟನೆ ಮಂಗಳೂರು ನಗರದ ಕುಂಪಲದಲ್ಲಿ ನಡೆದಿದೆ.
ಕುಂಪಲ ಆಶ್ರಯ ಕಾಲನಿಯಲ್ಲಿ ವಾಸವಿರುವ ತಮಿಳುನಾಡು ಮೂಲದ ಸೋಮನಾಥ ಮತ್ತು ಭವ್ಯಾ ದಂಪತಿಯ ಹಿರಿಯ ಪುತ್ರಿ ಧನ್ಯಾ(17) ಮೃತ ವಿದ್ಯಾರ್ಥಿನಿ. ಇವರು ಮಂಗಳೂರು ನಗರದ ರಾಮಕೃಷ್ಣ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿಯಾಗಿದ್ದರು.
ಉಪ್ಪಿನಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ತಾಯಿ, ಭವ್ಯಾ ಮೊನ್ನೆ ಮಧ್ಯಾಹ್ನ ಮನೆಗೆ ಬಂದಾಗ ಕಾಲೇಜಿಗೆ ರಜೆಯಲ್ಲಿದ್ದ ಪುತ್ರಿ ಧನ್ಯಾ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಆಗಮಿಸಿದ ಧನ್ಯಾರನ್ನು ಇಷ್ಟು ಹೊತ್ತು ಎಲ್ಲಿ ಹೋಗಿದ್ದೆ ಎಂದು ಪ್ರಶ್ನಿಸಿ ತಾಯಿ ಗದರಿಸಿದ್ದರು.
ಇದರಿಂದ ನೊಂದ ಧನ್ಯಾ, ತಾಯಿ ಪಕ್ಕದ ಮನೆಗೆ ತೆರಳಿದ್ದ ವೇಳೆ ಮನೆಯೊಳಗಿದ್ದ ಗೆದ್ದಲು ಹೊಡೆಯುವ ಕೀಟನಾಶಕ ಸೇವಿಸಿದ್ದಾರೆನ್ನಲಾಗಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಧನ್ಯಾರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರಿಂದು ಇಹಲೋಕ ತ್ಯಜಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw