ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಗೊಂದಲ ವಿಚಾರ: ಮುಸ್ಲಿಂ ಮುಖಂಡರ ಮಹತ್ವದ ಸಭೆ - Mahanayaka

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಗೊಂದಲ ವಿಚಾರ: ಮುಸ್ಲಿಂ ಮುಖಂಡರ ಮಹತ್ವದ ಸಭೆ

mangalore north assembly constituency
19/02/2023

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಮುಸ್ಲಿಂ ಮುಖಂಡರ ಮಹತ್ವದ ಸಭೆಯು ಮಂಗಳೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ  ನಡೆಯಿತು.

ಈ ಸಭೆಯಲ್ಲಿ ಪ್ರಮುಖವಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರದಲ್ಲಿನ ಗೊಂದಲದ ಕುರಿತು ಹಾಗೂ ಜಿಲ್ಲೆಯಲ್ಲಿ ಸಮುದಾಯ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಟಿಕೆಟ್ ಆಕಾಂಕ್ಷಿಗಳಾದ ಮಾಜಿ ಶಾಸಕ ಮೊಯ್ದಿನ್ ಬಾವ ಹಾಗೂ ಇನಾಯತ್ ಅಲಿ ಅವರು ಮಾತನಾಡಿ, ಹೈಕಮಾಂಡ್ ಇಬ್ಬರಲ್ಲಿ ಯಾರಿಗೆ ಟಿಕೆಟ್ ನೀಡಿದರೂ ನಾವು ಗೆಲುವಿಗಾಗಿ ಒಗ್ಗಟ್ಟಿನಿಂದ ನಿಸ್ವಾರ್ಥವಾಗಿ ದುಡಿಯುತ್ತೇವೆ ಎನ್ನುವ ಮೂಲಕ ಒಗ್ಗಟ್ಟಿನ ಮಂತ್ರ ಜಪಿಸಿದರು.


Provided by

ಇದರಿಂದ ಟಿಕೆಟ್ ವಿಚಾರದಲ್ಲಿನ ಗೊಂದಲಕ್ಕೆ ತೆರೆ ಬಿದ್ದಂತಾಯಿತು. ಈ ಸಭೆಯಲ್ಲಿ ಯೆನಪೋಯ ಅಬ್ದುಲ್ಲ ಕುಂಞಿ, ಯು.ಟಿ. ಖಾದರ್, ಕೆ.ಎಸ್. ಮೊಹಮ್ಮದ್ ಮಸೂದ್, ಮಾಜಿ ಮೇಯರ್ ಅಶ್ರಫ್ ಸಹಿತ ಮುಸ್ಲಿಂ ಸಮುದಾಯದ ಪ್ರಮುಖ ರಾಜಕೀಯ, ಸಾಮಾಜಿಕ ಮುಖಂಡರು ಭಾಗವಹಿಸಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ