ಜೆ.ಪಿ.ನಡ್ಡಾಗೆ ಸ್ವಾಗತ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ನ್ನು ಹರಿದು ಹಾಕಿದ ಕಿಡಿಗೇಡಿಗಳು!
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನಾಳೆ ಉಡುಪಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿಯಿಂದ ನಗರದಾದ್ಯಂತ ಫ್ಲೆಕ್ಸ್, ಬಂಟಿಂಗ್ಸ್ ಅಳವಡಿಸಲಾಗಿದ್ದು, ಆದರೆ ಕಿಡಿಗೇಡಿಗಳು ಫ್ಲೆಕ್ಸ್ ಗಳಿಗೆ ಹಾನಿ ಮಾಡಿರುವ ಘಟನೆ ನಡೆದಿದೆ.
ಉಡುಪಿಯ ಬನ್ನಂಜೆಯಲ್ಲಿ ಜೆ.ಪಿ.ನಡ್ಡಾ ಅವರಿಗೆ ಸ್ವಾಗತ ಕೋರಿ ರಸ್ತೆ ಬದಿಯಲ್ಲಿ ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.
ಘಟನೆ ಸಂಬಂಧ ಜಿಲ್ಲಾ ಬಿಜೆಪಿ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ಕಳೆದ ರಾತ್ರಿ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw