BreakingNews: ಕಡಬ: ಕಾಡಾನೆ ದಾಳಿಗೆ ಇಬ್ಬರು ಬಲಿ
ಕಡಬ: ಬೆಳ್ಳಂ ಬೆಳಗ್ಗೆ ಆನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಸಂಭವಿಸಿದೆ.
ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಮೃತಪಟ್ಟವರು. ರಂಜಿತಾ ರೆಂಜಿಲಾಡಿ ಹಾಲು ಸೊಸೈಟಿ ಉದ್ಯೋಗಿಯಾಗಿದ್ದು, ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ ಮನೆ ಸಮೀಪ ಆಕೆಯ ಮೇಲೆ ಆನೆ ದಾಳಿ ನಡೆಸಿದೆ.
ಆಕೆ ಬೊಬ್ಬೆ ಹೊಡೆದ ವೇಳೆ ಅಲ್ಲಿಗೆ ರಕ್ಷಿಸಲು ಬಂದ ರಮೇಶ್ ಎಂಬವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ರಮೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಯುವತಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ಕಾಡಾನೆಗಳ ಹಾವಳಿ ಮುಂದುವರಿದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw