ಸಾಹಿತ್ಯ, ನಾಟಕ ರಂಗದ ಮೇರು ಚೇತನ ಅಂಬಾತನಯ ಮುದ್ರಾಡಿ ನಿಧನ
ಉಡುಪಿ: ಸಾಹಿತ್ಯ, ಕಲೆ, ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿರುವ ಶ್ರೀ ಅಂಬಾತನಯ ಮುದ್ರಾಡಿಯವರು ಇಂದು ಬೆಳಿಗ್ಗೆ 7.30ಕ್ಕೆ ನಿಧನರಾದರು.
ಯಕ್ಷಗಾನ, ತಾಳಮದ್ದಲೆ, ಹರಿಕಥೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿದ್ದ ಇವರು, ಹಲವಾರು ಸಾಹಿತ್ಯ,ನಾಟಕ ಕೃತಿಗಳನ್ನು ರಚಿಸಿದ್ದರು.
ಉಡುಪಿ ಜಿಲ್ಲಾ ರಾಜ್ಯೋತ್ಸವ, ಅಕಾಡೆಮಿ ಪುರಸ್ಕಾರಗಳೊಂದಿಗೆ ಹಲವಾರು ಪ್ರಶಸ್ತಿ ಪುರಸ್ಕೃತರಾದ ಇವರಿಗೆ, 2005ರಲ್ಲಿ ರಂಗಭೂಮಿ ಉಡುಪಿ ಸಂಸ್ಥೆಯು ” ಸಾಹಿತ್ಯ ಕಲಾ ವಾಚಸ್ಪತಿ” ಬಿರುದಿನೊಂದಿಗೆ ರಂಗಭೂಮಿ ಪ್ರಶಸ್ತಿ ನೀಡಿದ್ದಲ್ಲದೆ.
2017ರ ” ಆನಂದೋತ್ಸವ”ದ ಸಂದರ್ಭದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ ಕೊಡಮಾಡುವ ” ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಪ್ರಶಸ್ತಿ” ಯನ್ನೂ ನೀಡಿ ಗೌರವಿಸಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw