ಪೊಲೀಸ್ ದಾಳಿ; ಭಾರೀ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ: 6 ಜನರ ಬಂಧನ
ಚಿಕ್ಕಮಗಳೂರು: ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಂದೂಕು ದುರಸ್ತಿಪಡಿಸುವ ಅಂಗಡಿಗಳಿಗೆ ದಾಳಿ ನಡೆಸಿದ ಪೊಲೀಸರು ಭಾರೀ ಪ್ರಮಾಣದ ಅಕ್ರಮ ಬಂದೂಕು, ರಿವಾಲ್ವರ್ ಪತ್ತೆ ಹಚ್ಚಿದ್ದು ಆರು ಜನರನ್ನು ಬಂಧಿಸಿದ್ದಾರೆ.
ಬಾಳೆಹೊನ್ನೂರು, ಬಾಳೂರು, ಕಳಸ ಹಾಗೂ ಎನ್ ಆರ್ ಪುರ ಠಾಣೆ ವ್ಯಾಪ್ತಿಯಲ್ಲಿ ಈ ದಾಳಿ ನಡೆದಿದೆ. ಪರವಾನಿಗೆ ರಹಿತ 41 , ಪರವಾನಿಗೆ ಸಹಿತ 10 ಬಂದೂಕು, ಎರಡು ರಿವಾಲ್ವರ್, 22 ರೈಫಲ್ ಗುಂಡು, 40 ಬುಕ್ ಶಾಟ್ ಗುಂಡು, ಬಂದೂಕು ನಳಿಕೆ, ಕಾರ್ಟ್ರೆಜ್ ಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಈ ಸಂಬಂಧ ನೇತ್ರಕುಂಡ ಎಸ್ಟೇಟಿನ ಸದಾಶಿವಾಚಾರ್, ಬಾಳೂರಿನ ಸುಧಾಕರ್ ಆಚಾರಿ, ಬಾಳೆಹೊನ್ನೂರಿನ ರಾಮಚಂದ್ರ ಆಚಾರಿ, ಮಾವಿನಕೆರೆಯ ಸುಂದರ, ಗಂಗಾಧರ, ಆಡುವಳ್ಳಿಯ ಶಿವರಾಜ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw