ಕಳವಾದ, ಸುಲಿಗೆಯಾದ ಮೊಬೈಲ್ ಬ್ಲಾಕ್ ಮಾಡಲು ದ.ಕ. ಪೊಲೀಸರಿಂದ ನೂತನ ಕ್ರಮ - Mahanayaka
10:45 PM Wednesday 5 - February 2025

ಕಳವಾದ, ಸುಲಿಗೆಯಾದ ಮೊಬೈಲ್ ಬ್ಲಾಕ್ ಮಾಡಲು ದ.ಕ. ಪೊಲೀಸರಿಂದ ನೂತನ ಕ್ರಮ

dakshina kannada police
24/02/2023

ಇತ್ತೀಚಿನ ದಿನಗಳಲ್ಲಿ ಕಳವಾದ/ಕಳೆದು ಹೋದ /ಸುಲಿಗೆಯಾದ   ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ  ಸಿಇಐಆರ್ ಪೋರ್ಟಲ್ ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದೆ.

ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು ಸೆನ್ ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು.

ಮೊಬೈಲ್ ಕಳೆದುಹೋದರೆ, ಕಳವಾದರೆ, ಸುಲಿಗೆಯಾದರೆ ತಕ್ಷಣವೇ ಇ — ಲಾಸ್ಟ್ ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು  ಸಿಇಐಆರ್ ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳವಾದ, ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ ಎಂದು ದಕ್ಷಿಣ ಕನ್ನಡ ಪೊಲೀಸ್ ಇಲಾಖೆ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ