ಉಜಿರೆ ಲಾಡ್ಜ್ ಪರಿಶೀಲಿಸಿ ಮಾಲಿಕರಿಗೆ ಎಚ್ಚರಿಕೆ ನೀಡಿದ ಪೊಲೀಸರು
ಬೆಳ್ತಂಗಡಿ: ಉಜಿರೆಯ ಲಾಡ್ಜ್ ಗಳಲ್ಲಿ ಬೆಳ್ತಂಗಡಿ ಇನ್ಸ್ ಪೆಕ್ಟರ್ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಪೊಲೀಸರು ಶನಿವಾರ ರಾತ್ರಿ ಪರಿಶೀಲನೆ ನಡೆಸಿ ವಸತಿಗೃಹದ ಮಾಲಕರುಗಳಿಗೆ ಎಚ್ಚರಿಕೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಪೊಲೀಸರು ಪರಿಶೀಲನೆ ನಡೆಸಿದಾಗ ಉಜಿರೆಯ ಒಂದು ವಸತಿ ಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ಕಂಡು ಬಂದಿತ್ತು. ಐವರು ಮಹಿಳೆಯರನ್ನು ರಕ್ಷಿಸಲಾಗಿತ್ತು ಇಬ್ಬರನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಇಂದು ಮತ್ತೆ ಪೊಲೀಸರು ಪರಿಶೀಲನೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ಪರಿಶೀಲನೆಯ ವೇಳೆ ಯಾವುದೇ ಅಕ್ರಮಗಳು ಕಂಡು ಬಂದಿಲ್ಲ ಎನ್ನಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw