ಬೈಕ್—ಸ್ಕೂಟರ್ ನಡುವೆ ಭೀಕರ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ: 2 ತುಂಡಾದ ಸ್ಕೂಟಿ

ಚಿಕ್ಕಮಗಳೂರು: ಬೈಕ್ ಹಾಗೂ ಸ್ಕೂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಟ್ಟು ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಬಣಕಲ್ ಮತ್ತು ಕೊಟ್ಟಿಗೆಹಾರ ಮಧ್ಯೆ ನಡೆದಿದೆ.
ಸ್ಕೂಟಿಯಲ್ಲಿದ್ದ ಇಬ್ಬರು ಹಾಗೂ ಬೈಕ್ ಸವಾರ ಗಾಯಗೊಂಡವರಾಗಿದ್ದು, ಸವಾರರಿಗೆ ಕೈಕಾಲು ಮುರಿತಕ್ಕೊಳಗಾಗಿದ್ದು, ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಿ, ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದ ತೀವ್ರತೆಗೆ ಸ್ಕೂಟಿ ಎರಡು ತುಂಡಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಗಳ ಅಪಘಾತದ ವೇಳೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಘಟನೆಯೂ ಇದೇ ವೇಳೆ ನಡೆಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw