ಸಮುದ್ರ ತೀರದಲ್ಲಿ ತಲವಾರು ಝಳಪಿಸಿದ ದುಷ್ಕರ್ಮಿಗಳು: ಹಲ್ಲೆ ನಡೆಸಿ, ಗ್ರಾಮಸ್ಥರಿಗೆ ಬೆದರಿಕೆ
ಸಮುದ್ರ ತೀರದಲ್ಲಿ ಇಬ್ಬರ ತಂಡವೊಂದು ರಿಕ್ಷಾ ಚಾಲಕ ಸೇರಿ ಗ್ರಾಮಸ್ಥರಿಗೆ ತಲವಾರು ಝಳಪಿಸಿ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಸುರತ್ಕಲ್ ನ ಚಿತ್ರಾಪುರ ಸಮೀಪ ನಡೆದಿದೆ.
ಗಾಂಜಾ ಸೇವಿಸಿದ ಅಮಲಿನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸುನಿಲ್ ಎಂಬ ರಿಕ್ಷಾ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ರಿಕ್ಷಾ ಪುಡಿಗೈಯಲಾಗಿದೆ. ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಸ್ಥಳೀಯರ ಸಹಕಾರದಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನೋರ್ವ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ. ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಕಳೆದ ಹಲವು ತಿಂಗಳಿನಿಂದ ಮಾದಕ ವ್ಯಸನಿಗಳು ಅನೈತಿಕ ಚಟುವಟಿಕೆ ನಡೆಸುತ್ತಿದ್ದರು.
ಈ ಕುರಿತು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು ಎಂದು ತಿಳಿದುಬಂದಿದೆ. ಇದೇ ದ್ವೇಷದಿಂದ ಈ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw