ರಾಜ್ಯದ ವಿಚಾರದಲ್ಲಿ ಸುಳ್ಳು ಹೇಳಿರುವ ಪ್ರಧಾನಿ ಮೋದಿಯವರು ಜನರಲ್ಲಿ ಕ್ಷಮೆಯಾಚಿಸಬೇಕು: ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕದ ವಿಚಾರದಲ್ಲಿ ಸುಳ್ಳು ಹೇಳಿರುವ ಪ್ರಧಾನಿ ನರೇಂದ್ರ ಮೋದಿಯವರು ಜನರ ಕ್ಷಮೆ ಕೇಳಬೇಕು. ರಾಜ್ಯದ ಪಾಲಿನ ಅನುದಾನಗಳನ್ನು ನ್ಯಾಯಯುತವಾಗಿ ಕೊಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಪ್ರಧಾನಿ ನರೇಂದ್ರಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ದೇಶದ ಕೆಲಸ ಮಾಡುವುದನ್ನು ಬಿಟ್ಟು ಕೇವಲ ಬಿಜೆಪಿಯ ಚುನಾವಣಾ ಏಜೆಂಟರಾಗಿ ದುಡಿಯುತ್ತಿದ್ದಾರೆ. ನಮ್ಮ ರಾಜ್ಯದ ಜನರಿಂದ ದೋಚಿಕೊಂಡ ಸಂಪತ್ತನ್ನು ಪ್ರವಾಹ, ಬರ, ಕೋವಿಡ್ ನಂತಹ ಮಾರಕ ಕಾಯಿಲೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ, ಜನರ ಕಲ್ಯಾಣಕ್ಕೆ ಖರ್ಚು ಮಾಡುವ ಬದಲು ಚುನಾವಣಾ ಪ್ರಚಾರಗಳಿಗೆ ಖರ್ಚು ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾನು ಮೋದಿಯವರು ರಾಜ್ಯಕ್ಕೆ ಬಂದಾಗಲೆಲ್ಲ ಕರ್ನಾಟಕದ ಜನರಿಂದ ಲೂಟಿಯ ರೀತಿಯಲ್ಲಿ ಸಂಗ್ರಹಿಸುತ್ತಿರುವ ತೆರಿಗೆ, ಮೇಲ್ತೆರಿಗೆಗಳಲ್ಲಿ ರಾಜ್ಯಕ್ಕೆ ನ್ಯಾಯವಾದ ಪಾಲು ಕೊಡದೆ ಜನರಿಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸುತ್ತಲೆ ಇದ್ದೇನೆ. ಈ ಕುರಿತು ಇದುವರೆಗೆ ಮಾತನಾಡದ ಮೋದಿಯವರು ಇತ್ತೀಚೆಗೆ ನವದೆಹಲಿಯ ಕರ್ನಾಟಕ ಭವನದ ಅಮೃತ ಮಹೋತ್ಸಹ ಹಾಗೂ ಬಾರಿಸು ಕನ್ನಡ ಡಿಂಡಿಮವ ಎಂಬ ಕಾರ್ಯಕ್ರಮದಲ್ಲಿ ತಾವು ಕರ್ನಾಟಕದ ರೈಲ್ವೆಗೆ, ಹೆದ್ದಾರಿ ಯೋಜನೆಗಳಿಗೆ ಬಹಳ ಅನುದಾನಗಳನ್ನು ಕೊಟ್ಟಿದ್ದೇವೆ ಹಾಗೂ ಅನುದಾನಗಳನ್ನು ಹೆಚ್ಚಿಸಿದ್ದೇವೆ, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರಕ್ಕಿಂತ ಎಷ್ಟೊ ಪಾಲು ಹೆಚ್ಚು ಕೊಟ್ಟಿದ್ದೇವೆ ಎಂದು ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw