ಬಿಜೆಪಿಯ ‘ಪ್ರಗತಿ ರಥ’ ಯಾತ್ರೆಗೆ ಮಂಗಳೂರಿನಲ್ಲಿ ಚಾಲನೆ
ಸರಕಾರಗಳ ಜನಪರ ಯೋಜನೆಗಳ ಮಾಹಿತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ತಿಳಿಸಲು ಜಿಲ್ಲಾದ್ಯಂತ ಸಂಚರಿಸಲಿರುವ ಬಿಜೆಪಿಯ ‘ಪ್ರಗತಿ ರಥ’ ಯಾತ್ರೆಗೆ ಕದ್ರಿ ಮೈದಾನದಲ್ಲಿ ಸೋಮವಾರ ಚಾಲನೆ ನೀಡಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಗತಿ ರಥ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಚುನಾವಣೆ ಘೋಷಣೆ ಆಗುವ ತನಕ ಈ ರಥ ಜಿಲ್ಲಾದ್ಯಂತ ಸಂಚರಿಸಲಿದ್ದು, ಕೇಂದ್ರ, ರಾಜ್ಯ ಸರಕಾರದ ಜನಪರ ಯೋಜನೆಯ, ಸಾಧನೆಯನ್ನು ಜನರ ಮನೆಮನಗಳಿಗೆ ತಿಳಿಸಲಿದೆ ಎಂದರು.
ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಮಾತನಾಡಿದರು. ಮನಪಾ ಮೇಯರ್ ಜಯಾನಂದ ಅಂಚನ್, ಉಪಮೇಯರ್ ಪೂರ್ಣಿಮಾ ಪ್ರಗತಿ ರಥದ ರಾಜ್ಯದ ಸಹ ಸಂಚಾಲಕ ಪ್ರೇಮಾನಂದ ಶೆಟ್ಟಿ, ಧುರೀಣರಾದ ವಿಜಯ ಕುಮಾರ್ ಶೆಟ್ಟಿ, ಸುದೀಪ್ ಶೆಟ್ಟಿ, ಈಶ್ವರ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw