ಬಡವರಿಗೆ ಉಚಿತವಾಗಿ ಕೊವಿಡ್ ಲಸಿಕೆ ನೀಡಿ | ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಮನವಿ
03/01/2021
ನವದೆಹಲಿ: ಕೊರೊನಾ ಲಸಿಕೆಯು ಕಡುಬಡವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಉಚಿತವಾಗಿ ನೀಡಬೇಕು ಎಂದು ಬಹುಜನ ಸಮಾಜ ಪಾರ್ಟಿಯ ಮುಖ್ಯಸ್ಥೆ ಮಾಯಾವತಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೊರೊನಾ ಲಸಿಕೆ ಅಭಿವೃದ್ಧಿ ಪಡಿಸುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಸೀರಮ್ ಇನ್ಸ್ ಸ್ಟಿಟ್ಯೂಟ್ ಅಭಿವೃದ್ಧಿ ಪಡಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೇಕ್ ನ ಕೋವ್ಯಾಕ್ಸಿನ್ ಲಸಿಕೆಗಳನ್ನು ದೇಶದಲ್ಲಿ ತುರ್ತು ಬಳಕೆಗೆ ಅನುಮತಿ ನೀಡಿರುವುದನ್ನು ಸ್ವಾಗತಿಸಿದರು.
ಕೊವಿಡ್ ಗೆ ಸ್ವದೇಶಿ ಲಸಿಕೆ ಅಭಿವೃದ್ಧಿಪಡಿಸಿರುವುದು ಸ್ವಾಗತಾರ್ಹವಾಗಿದೆ. ಈ ಲಸಿಕೆಯನ್ನು ಅಭಿವೃದ್ಧಿ ಪಡಿಸಿದ ವಿಜ್ಞಾನಿಗಳಿಗೆ ಅಭಿನಂದನೆಗಳು. ಬಡವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಸರ್ಕಾರವು ಉಚಿತವಾಗಿ ಕೊರೊನಾ ಲಸಿಕೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.