ದೇಶವನ್ನೇ ಬೆಚ್ಚಿಬೀಳಿಸಿದ್ದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ಅಪರಾಧಿಗೆ ಜೀವಾವಧಿ ಶಿಕ್ಷೆ
![hathras](https://www.mahanayaka.in/wp-content/uploads/2023/03/hathras.jpg)
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉತ್ತರ ಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಸಿಸೋಡಿಯಾಗೆ ಎಸ್ಸಿ/ಎಸ್ಟಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ರ ಅಡಿಯಲ್ಲಿ ಸಂದೀಪ್ ಅವರದು ನರಹತ್ಯೆಯ ಅಪರಾಧವೆಂದು ಪರಿಗಣಿಸಲಾಗಿದೆ. ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಮೂವರು ಆರೋಪಿಗಳಾದ ರವಿ(35), ಲವ್ ಕುಶ್(23) ಮತ್ತು ರಾಮು (26) ಅವರನ್ನು ಖುಲಾಸೆಗೊಳಿಸಲಾಗಿದ್ದು, ಸಂದೀಪ್(20) ಮಾತ್ರ ಅಪರಾಧಿ ಎಂದು ಸಾಬೀತಾಗಿದೆ.
2020ರ ಸೆಪ್ಟಂಬರ್ ನಲ್ಲಿ ಪಶ್ಚಿಮ ಉತ್ತರ ಪ್ರದೇಶದ ಹತ್ರಾಸ್ ಪ್ರದೇಶದ ಬೂಲ್ ಗರ್ಹಿಯಲ್ಲಿ ದಲಿತ ಬಾಲಕಿಯ ಮೇಲೆ ಮೃಗೀಯವಾಗಿ ಅತ್ಯಾಚಾರ ನಡೆಸಲಾಗಿತ್ತು. ಈ ಘೋರ ಕೃತ್ಯದಿಂದ 15 ದಿನಗಳ ನಂತರ ಬಾಲಕಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ಈ ಪ್ರಕರಣವನ್ನು ಮುಚ್ಚಿ ಹಾಕಲು ಸಾಕಷ್ಟು ಪ್ರಯತ್ನಗಳು ನಡೆದಿದ್ದವು. ಬಾಲಕಿಯ ಅಂತ್ಯಕ್ರಿಯೆಯನ್ನು ಪೊಲೀಸರೇ ಆತುರಾತುರವಾಗಿ ನಡೆಸಿ ಸಾಕ್ಷ್ಯ ನಾಶಕ್ಕೆ ಯತ್ನಿಸಿರುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw