ಕಳ್ಳತನ ಪ್ರಕರಣ: ಇಬ್ಬರು ಅಪ್ರಾಪ್ತ ಬಾಲಕರು ಸಹಿತ ನಾಲ್ವರ ಬಂಧನ
ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ಬಾಲಕರು ಸಹಿತ ನಾಲ್ವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಅಲೆವೂರು ಆದರ್ಶನಗರ ನಿವಾಸಿ 19 ವರ್ಷದ ವರುಣ್ ಕೊಡಂಚ ಮತ್ತು 19ವರ್ಷದ ಕಾರ್ತಿಕ್ ಪೂಜಾರಿ ಬಂಧಿತ ಆರೋಪಿಗಳು. ಇವರು ಫೆ.18ರಂದು ರಾತ್ರಿ ಶಿವಳ್ಳಿ ಗ್ರಾಮದ ನೆಹರು ನಗರದ ಮನೆಯೊಂದಕ್ಕೆ ನುಗ್ಗಿ ಕಪಾಟಿನೊಳಗೆ ಇದ್ದ 2.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಾರ್ಯಾಚರಣೆಗೆ ಇಳಿದ ಪೊಲೀಸರು, ಇಬ್ಬರು ಅಪ್ರಾಪ್ತ ಬಾಲಕರು ಸಹಿತ ಒಟ್ಟು ನಾಲ್ವರು ಆರೋಪಿಗಳನ್ನು ಪೆರಂಪಳ್ಳಿ ಶೀಂಬ್ರಾ ಕ್ರಾಸ್ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಿಂದ 2.40 ಲಕ್ಷ ಚಿನ್ನಾಭರಣ, 1 ಸ್ಕೂಟರ್ ಹಾಗೂ ಕೃತ್ಯಕ್ಕೆ ಬಳಸಿದ 1 ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw