ವೇದಿಕೆಯಲ್ಲಿ ಕುಮಾರಸ್ವಾಮಿಯನ್ನು ಗದರಿದ ಅನಿತಾ ಕುಮಾರಸ್ವಾಮಿ: ವಿಡಿಯೋ ವೈರಲ್ - Mahanayaka
5:59 AM Thursday 12 - December 2024

ವೇದಿಕೆಯಲ್ಲಿ ಕುಮಾರಸ್ವಾಮಿಯನ್ನು ಗದರಿದ ಅನಿತಾ ಕುಮಾರಸ್ವಾಮಿ: ವಿಡಿಯೋ ವೈರಲ್

kumaraswamy anitha
03/03/2023

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವೇದಿಕೆಯಲ್ಲೇ ಪತ್ನಿ ಅನಿತಾ ಕುಮಾರಸ್ವಾಮಿ ಮುನಿಸಿಕೊಂಡ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿ ಕುಳಿತಿದ್ದ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಮಾತನಾಡುತ್ತಿದ್ದು, ಈ ವೇಳೆ ಅನಿತಾ ಅವರು, ಕುಮಾರಸ್ವಾಮಿಯನ್ನು ಗದರಿಸುತ್ತಿರುವ ದೃಶ್ಯ ಸೆರೆಯಾಗಿದೆ.

ಇನ್ನೂ ಈ ವಿಡಿಯೋ ಇದೀಗ ವ್ಯಾಪಕವಾಗಿ ವೈರಲ್ ಆಗುತ್ತಿದ್ದು, ವಿಪಕ್ಷಗಳು ವಿಡಿಯೋವನ್ನು ಬಳಸಿಕೊಂಡು ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡುತ್ತಿದ್ದಾರೆ.

ಇನ್ನೊಂದೆಡೆ, ಊರಿಗೆ ಅರಸನಾದರೂ ತಾಯಿಗೆ ಮಗ ಅನ್ನೋವಂತೆ, ಎಷ್ಟು ಎತ್ತರದ ಸ್ಥಾನದಲ್ಲಿದ್ದರೂ ಗಂಡ ಹೆಂಡತಿ ಜಗಳ ಇದ್ದದ್ದೆ, ಈ ದೃಶ್ಯವನ್ನು ನೋಡುವುದೇ ಚಂದ ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ