ಇರುವೆಗೆ ಸಿಂಪಡಿಸುವ ವಿಷ ತಿಂದು ಬಾಲಕ ಸಾವು - Mahanayaka
8:10 AM Thursday 12 - December 2024

ಇರುವೆಗೆ ಸಿಂಪಡಿಸುವ ವಿಷ ತಿಂದು ಬಾಲಕ ಸಾವು

shivu
03/03/2023

ಇರುವೆಗೆ ಸಿಂಪಡಿಸುವ ಇರುವೆ ನಾಶಕ ತಿಂದು 5 ವರ್ಷದ ಬಾಲಕ ಅಸುನೀಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ‌  ಪುಟ್ಟಿರಮ್ಮನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಸಾವನ್ನಪ್ಪಿದ ಬಾಲಕ. ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆ ಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು.  ಮಗು ಆ ಆಟವಾಡುವ ಸಮಯದಲ್ಲಿ ಇರುವೆ ಪುಡಿಯನ್ನು ತಿಂದು  ಅಸ್ವಸ್ಥಗೊಂಡಿದೆ.

ಇದನ್ನು ಗಮನಿಸಿದ ಪೋಷಕರು ತಕ್ಷಣ ಕಾಮಗೆರೆ  ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಮಗು ಚಿಕಿತ್ಸೆಗೆ ಫಲಿಸದೆ ಗುರುವಾರ  ರಾತ್ರಿ ಸಾವನ್ನಪ್ಪಿದೆ.  ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ