ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿಶ್ವವಿಖ್ಯಾತಿಯನ್ನು ಪಡೆದಿದೆ: ರಣದೀಪ್ ಸಿಂಗ್ ಸುರ್ಜೆವಾಲ ಪ್ರಶ್ನೆಗಳ ಸುರಿಮಳೆ
ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ, 40% ಭ್ರಷ್ಟ ಸರ್ಕಾರದಿಂದ ರಾಜ್ಯ ತಲೆತಗ್ಗಿಸುವಂತಾಗಿದೆ, ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ 40 ಲಕ್ಷ ರೂಪಾಯಿ ರೆಡ್ ಹ್ಯಾಂಡ್ ಆಗಿ ಸಿಕ್ಕಿದೆ, 24 ಗಂಟೆ ಒಳಗೆ ಮನೆಯಲ್ಲಿ 6 ಕೋಟಿ ರೂಪಾಯಿ ಪತ್ತೆಯಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ರಣದೀಪ್ ಸಿಂಗ್ ಸುರ್ಜೆವಾಲ ಕಿಡಿಕಾರಿದ್ದಾರೆ.
ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಆರು ಕೋಟಿ ರುಪಾಯಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಶಾಸಕ ವಿರುಪಾಕ್ಷಪ್ಪ ಎಲ್ಲಿ ತಲೆಮರಸಿಕೊಂಡಿದ್ದಾರೆ?, ಮೈಸೂರು ಸ್ಯಾಂಡಲ್ ಸುವಾಸನೆಯನ್ನು ಭ್ರಷ್ಟ ಮಾಡಿಬಿಟ್ಟಿದ್ದಾರೆ, ಇದು ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಹಿಡಿದ ಕೈಗನ್ನಡಿ, ಸಾಬೂನಿನಿಂದ ಎಷ್ಟು ಭ್ರಷ್ಟಾಚಾರವಾಗಿದ್ದರೆ ರಾಜ್ಯದ ಭ್ರಷ್ಟಾಚಾರ ಪ್ರಮಾಣ ಎಷ್ಟು? ಈ ಎಲ್ಲಾ ಭ್ರಷ್ಟಾಚಾರದ ಹಣ ಎಲ್ಲಿಗೆ ಹೋಗಿದೆ? ರಾಜ್ಯದಲ್ಲಿ ಲೂಟಿ ಹೊಡೆದ ಹಣಕ್ಕೆ ಯಾರು ಜವಾಬ್ದಾರಿ? ಲೂಟಿ ಹೊಡೆದ ಹಣದಲ್ಲಿ ಬಸವರಾಜ್ ಬೊಮ್ಮಾಯಿ, ಮಂತ್ರಿಗಳಿಗೆ ಎಷ್ಟು ಪಾಲು ಇದೆ? ಕೈಗಾರಿಕಾ ಸಚಿವ ನಿರಾಣಿಯ ತಲೆದಂಡ ಆಗಿಲ್ಲ ಯಾಕೆ? ಕೆ ಎಸ್ ಡಿ ಎಲ್ ಅಧ್ಯಕ್ಷ ಶಾಸಕ ವಿರೂಪಾಕ್ಷಪ್ಪ ತಲೆಮರೆಸಿಕೊಳ್ಳಲು ಬಿಟ್ಟಿದ್ಯಾಕೆ? ಈ ಭ್ರಷ್ಟಾಚಾರದಲ್ಲಿ ಬಸವರಾಜ ಬೊಮ್ಮಾಯಿ ಪಾತ್ರ ಏನು? ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೌನ ಇರುವುದು ಯಾಕೆ? ಎಂದು ಅವರು ಪ್ರಶ್ನಿಸಿದರು.
ನರೇಂದ್ರ ಮೋದಿ ಒಂದು ವಾಕ್ಯ ಒಂದು ಮಾತನಾಡುತ್ತಿಲ್ಲ ಯಾಕೆ? ಜೆಪಿ ನಡ್ದಾ? ಅಮಿತ್ ಶಾ ಎಲ್ಲಿದ್ದೀರಿ..!? ಇಡಿ, ಸಿ ಬಿ ಐ ಯಾವಾಗ ಕರ್ನಾಟಕಕ್ಕೆ ಬರುತ್ತದೆ ಶಾಸಕರು ಮಂತ್ರಿಗಳ ಮುಖ್ಯಮಂತ್ರಿಗಳ ಮನೆಗೆ ಯಾವಾಗ ದಾಳಿ ಮಾಡುತ್ತೀರಿ? ನಾಡಿನ ಜನರ ಪರವಾಗಿ ಈ ಎಲ್ಲ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ ಎಂದು ಅವರು ಪ್ರಶ್ನೆಗಳ ಸುರಿಮಳೆ ಸುರಿಸಿದರು.
ಚೆನ್ನಗಿರಿ ಶಾಸಕ ವಿರೂಪಾಕ್ಷಪ್ಪನ ಬಂಧನ ಆಗಬೇಕು:
ಚೆನ್ನಗಿರಿ ಶಾಸಕ ವಿರೂಪಾಕ್ಷಪ್ಪ ಬಂಧನವಾಗಬೇಕು, ಕೈಗಾರಿಕಾ ಸಚಿವ ನಿರಾಣಿಯ ತಲೆದಂಡ ಆಗಬೇಕು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಾಜೀನಾಮೆ ಕೊಡಬೇಕು. ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು, ಬೊಮ್ಮಾಯಿ ಮೂಗಿನ ಕೆಳಗೆ ನಡೆದ ಭ್ರಷ್ಟಾಚಾರ ಬಯಲಾಗಿದೆ, ಭ್ರಷ್ಟಾಚಾರದ ಹಣದಲ್ಲಿ ಯಾರಿಗೆಲ್ಲ ಪಾಲು ಇದೆ ಎಂಬುದನ್ನು ಬಿಜೆಪಿ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ಒಳಚರಂಡಿ ಮತ್ತು ನೀರು ಸರಬರಾಜು ಬೋರ್ಡ್ ನಲ್ಲಿ ಎಷ್ಟು ಸಾವಿರ ಕೋಟಿ ಈವರೆಗೆ ಲೂಟಿ ಮಾಡಿದ್ದೀರಿ? ಒಂದು ವಾರದಲ್ಲಿ ರಾಜ್ಯದ ಮುಖ್ಯ ನ್ಯಾಯ ಮೂರ್ತಿಗಳು ಈ ಬಗ್ಗೆ ತನಿಖೆ ನಡೆಸಬೇಕು, ಭ್ರಷ್ಟಾಚಾರ ಮತ್ತು ಲೂಟಿಯ ಸಂಪೂರ್ಣ ದಾಖಲೆಯನ್ನು ತೆರೆದಿಡಬೇಕು, ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿಶ್ವವಿಖ್ಯಾತಿಯನ್ನು ಪಡೆದಿದೆ ಎಂದು ರಣದೀಪ್ ಸಿಂಗ್ ಸುರ್ಜೆವಾಲ ವಾಗ್ದಾಳಿ ನಡೆಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw