ಶಿಶು ಮತ್ತು ತಾಯಿ ಮರಣ ಶೂನ್ಯಕ್ಕೆ ತನ್ನಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಜಿಲ್ಲೆಯಲ್ಲಿ ಹೆರಿಗೆಯ ಸಂದರ್ಭದಲ್ಲಿ ಮತ್ತು ನಂತರದಲ್ಲಿ ಸಂಭವಿಸುವ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆತರುವ ನಿಟ್ಟಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯರು ಸಂಘಟಿತ ಪ್ರಯತ್ನ ನಡೆಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ಶುಕ್ರವಾರಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಆರೋಗ್ಯಇಲಾಖೆಯ ವಿವಿದ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗರ್ಭಿಣಿ ಮಹಿಳೆಯರಿಗೆ ನೀಡುವತಾಯಿಕಾರ್ಡ್ ನಲ್ಲಿ ಪ್ರತಿ ತಿಂಗಳ ಪರೀಕ್ಷೆ ಮಾಡಿಕೊಳ್ಳಬೇಕಾದ ದಿನಾಂಕ, ತೆಗೆದುಕೊಳ್ಳಬೇಕಾದ ಔಷಧಿಗಳು ಮತ್ತು ಲಸಿಕೆಗಳ ಬಗ್ಗೆ ವಿವರವಾಗಿ ನಮೂದಿಸಿ, ಮಹಿಳೆಯರಿಗೆ ಮಾಹಿತಿ ನೀಡಬೇಕು.ತಿಂಗಳತಪಾಸಣೆಗೆ ಬಂದಂತಹ ಸಂದರ್ಭದಲ್ಲಿ ಆರೋಗ್ಯ ತಪಾಸಣೆ ವೇಳೆಯಲ್ಲಿ ಹೃದಯ ಸಂಬಂಧಿ ಮಧುಮೇಹ ಸೇರಿದಂತೆಇತರ ಖಾಯಿಲೆಗಳ ಬಗ್ಗೆಯೂ ಪರಿಕ್ಷೀಸಿ ಚಿಕಿತ್ಸೆನೀಡಬೆಕುಎಂದರು.
ಪ್ರತೀ ತಿಂಗಳು ನಡೆಯುವಆರೋಗ್ಯಇಲಾಖೆಯ ಸಭೆಯಲ್ಲಿ, ತಾಯಿಕಾರ್ಡ್ ಪರಿಶೀಲನೆ ಕುರಿತಂತೆ ಪ್ರತ್ಯೇಕ ವಿಷಯವನ್ನುಚರ್ಚಿಸುವಂತೆ ಹಾಗೂ ತಾಯಿ ಕಾರ್ಡ್ ಗಳನ್ನು ಸಂಬಂದಪಟ್ಟ ವೈದ್ಯರು ಪರಿಶೀಲಿಸಿರುವ ಬಗ್ಗೆ ನಿಗಾವಹಿಸುವಂತೆ ಸೂಚಿಸಿದರು.
ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಏಪ್ರಿಲ್ ನಿಂದ ಜನವರಿವರೆಗೆ ಒಟ್ಟು 11,136 ಹೆರಿಗೆಗಳು ನಡೆದಿದ್ದು, ಇದರಲ್ಲಿ 4 ತಾಯಿ ಮರಣ ಮತ್ತು 62 ನವಜಾತ ಶಿಶುಗಳ ಮರಣ ಸಂಭವಿಸಿರುವುದನ್ನು ಪರಿಶೀಲಿಸಿದ ಜಿಲ್ಲಾದಿಕಾರಿಗಳು, ಕ್ಲಿಷ್ಟಕರ ಹೆರಿಗೆಗಳ ಸಂದರ್ಭದಲ್ಲಿ ವೈದ್ಯರುಅಗತ್ಯ ನಿರ್ಧಾರಗಳನ್ನು ಶೀಘ್ರದಲ್ಲಿ ತೆಗೆದುಕೊಳ್ಳುವ ಮೂಲಕ ತಾಯಿ ಮರಣವನ್ನು ತಪ್ಪಿಸಲು ಮುಂದಾಗಬೇಕು. ತಾಯಿ ಮತ್ತು ಶಿಶು ಮರಣವನ್ನು ಕಡಿಮೆಗೊಳಿಸಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲೆಯಎಲ್ಲಾ ವೈದ್ಯರಿಗೆ ತಜ್ಞರಿಂದಕಾರ್ಯಗಾರವನ್ನುಆಯೋಜಿಸುವಂತೆ ತಿಳಿಸಿದರು.
ಜಿಲ್ಲೆಯಲ್ಲಿನ ಲಿಂಗತ್ವ ಅಲ್ಪಸಂಖ್ಯಾತರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಅವರಿಗೆ ವಿವಿಧ ಸ್ವ–ಉದ್ಯೋಗ ತರಬೇತಿಗಳನ್ನು ನೀಡುವಂತೆ ಹಾಗೂ ಅಗತ್ಯಧನ ಸಹಾಯವನ್ನು ಒದಗಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪ್ರೋಬೇಷನರಿ ಐ.ಎ.ಎಸ್. ಅಧಿಕಾರಿ ಯತೀಶ್, ಜಿಲ್ಲಾಆರೋಗ್ಯ ಮತ್ತುಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಹಾಗೂ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw