ಬೊಮ್ಮಾಯಿ ಅವರನ್ನು ಸಿದ್ದರಾಮಯ್ಯ ಜೊತೆಗೆ ಹೋಲಿಸುವುದು ಸರಿಯಲ್ಲ: ಅರುಣ್ ಸಿಂಗ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಜಿ, ಹಿರಿಯ ನಾಯಕ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯಲ್ಲಿ ಕರ್ನಾಟಕದ ಜನರಿಗೆ ಭರವಸೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.
ನಗರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಮೋದಿಜಿ ಅವರ ಕಾರ್ಯಕ್ರಮಗಳಲ್ಲಿ ಲಕ್ಷಾಂತರ ಜನರು ಸೇರುತ್ತಿದ್ದಾರೆ. ಇದು ಬಿಜೆಪಿ ಮತ್ತು ಬಿಜೆಪಿ ನಾಯಕತ್ವದ ಬಗ್ಗೆ ಜನರಿಗೆ ಇರುವ ವಿಶ್ವಾಸದ ಸಂಕೇತ ಎಂದು ನುಡಿದರು.
ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಭ್ರಷ್ಟಾಚಾರ ಸಂಬಂಧಿ ಪ್ರಕರಣದಲ್ಲಿ ಜಾಮೀನಿನಲ್ಲಿ ಹೊರಗಿದ್ದಾರೆ ಎಂದು ತಿಳಿಸಿದರು. ಕಾಮನ್ ಮ್ಯಾನ್, ಪ್ರಾಮಾಣಿಕ ವ್ಯಕ್ತಿತ್ವದ ಸಿಎಂ ಬೊಮ್ಮಾಯಿಯವರು ಹಿಂದೆ ಸಚಿವರಾಗಿಯೂ ಉತ್ತಮ ಕೆಲಸ ಮಾಡಿದ್ದರು; ಈಗ ಸಿಎಂ ಆಗಿದ್ದಾರೆ. ಅವರ ಮೇಲೆ ಒಂದು ರೂಪಾಯಿಯಷ್ಟು ಭ್ರಷ್ಟಾಚಾರದ ಆರೋಪ ಇಲ್ಲ ಎಂದು ತಿಳಿಸಿದರು.
ಬೊಮ್ಮಾಯಿ ಸಮರ್ಥ ನಾಯಕರು ಮತ್ತು ಸಿದ್ದರಾಮಯ್ಯ ಜೊತೆ ಅವರನ್ನು ಹೋಲಿಸುವುದು ಸರಿಯಲ್ಲ ಎಂದು ನುಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw