ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್: ಈ ಶಾಲೆ ಜ.8ರವರೆಗೆ ಬಂದ್!
ಚಿಕ್ಕಮಗಳೂರು: ಕೊರೊನಾ ಸಂಕಷ್ಟದ ನಡುವೆಯೇ ರಾಜ್ಯ ಸರ್ಕಾರ ಶಾಲೆಗಳನ್ನು ತೆರೆದಿದೆ.ಈ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತೆ ಚಟುವಟಿಕೆಗಳನ್ನು ಆರಂಭವಾಗಿದೆ. ಯಾವಾಗ ಶಾಲೆ, ಕಾಲೇಜು ತೆರೆಯುತ್ತದೆ ಎಂದು ಕಾತರದಿಂದ ವಿದ್ಯಾರ್ಥಿಗಳು ಕಾಯುತ್ತಿದ್ದ ಸಂದರ್ಭದಲ್ಲಿಯೇ ಇದೀಗ ಶಾಲೆ ಕಾಲೇಜುಗಳು ತೆರೆದಿವೆ. ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ರಿಪೋರ್ಟ್ ಬಂದಿದೆ.
ಜಿಲ್ಲೆಯ ಕಳಸ ಪಟ್ಟಣದ JEM ಪ್ರೌಢ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕಾರಣಕ್ಕಾಗಿ ಶಾಲೆಯನ್ನು ಜನವರಿ 8ರವರೆಗೆ ಬಂದ್ ಮಾಡಲು ಶಾಲಾ ಆಡಳಿತ ಮಂಡಳಿ ನಿರ್ಧರಿಸಿದೆ ಎಂದು ವರದಿಯಾಗಿದೆ.
ಒಂದೇ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕೊರೋನಾ ಸಂಕಷ್ಟದ ನಡುವೆಯೇ ಈ ಬಾರಿ ಶಾಲೆಗಳು ಕಾರ್ಯಾರಂಭ ಮಾಡುಡುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಶಾಲೆಯ ಮುಖ್ಯಸ್ಥರು ಯೋಚಿಸುತ್ತಿದ್ದಾರೆ. ಕೊರೊನಾವನ್ನು ಸವಾಲಾಗಿ ಸ್ವೀಕರಿಸಿದ್ದು, ಕೊರೊನಾದ ಕಾರಣದಿಂದಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ತೊಂದರೆಯಾಗಬಾರದು ಎನ್ನುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.