ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಬಿಜೆಪಿಯಿಂದ ಉಚ್ಛಾಟನೆ
ದಾವಣಗೆರೆ: ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರನ್ನು ಬಿಜೆಪಿಯು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಿದೆ.
ಕೆಎಸ್ ಡಿಎಲ್ ಟೆಂಡರ್ ಹಗರಣ ಆರೋಪದಲ್ಲಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿತ್ತು. ಈ ವೇಳೆ 8 ಕೋಟಿಗೂ ಅಧಿಕ ನಗದು ಪತ್ತೆಯಾಗಿತ್ತು.
ಇನ್ನೂ ಪಕ್ಷದಿಂದ ಉಚ್ಛಾಟನೆ ಮಾಡಲಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿದ ಮಾಡಾಳು ವಿರೂಪಾಕ್ಷಪ್ಪ, ನಾಯಕರು ಮಾಡಿರುವ ಕ್ರಮ ಸರಿಯಾಗಿದೆ, ನನ್ನ ಮೇಲೆ ಆರೋಪ ಕೇಳಿ ಬಂದಾಗ ಪಕ್ಷಕ್ಕೆ ಕಳಂಕ ಆಗಬಾರದು, ನಾನು ದೋಷ ಮುಕ್ತನಾದ ಮೇಲೆ ಮತ್ತೆ ಪಕ್ಷಕ್ಕೆ ಸೇರಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw