ಹೈ ಡೆನ್ಸಿಟಿ ಕಾರಿಡಾರ್ ಗಳಲ್ಲಿ ತಡೆರಹಿತ ವಾಹನ ಸಂಚಾರ ವ್ಯವಸ್ಥೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಹೈ ಡೆನ್ಸಿಟಿ ಕಾರಿಡಾರ್ ಗಳಲ್ಲಿ ತಡೆರಹಿತ ವಾಹನ ಸಂಚಾರ ವ್ಯವಸ್ಥೆಗೊಳಿಸಲಾಗುತ್ತಿದ್ದು, ಸುರಕ್ಷತೆ,ವಾಹನ ಸಂಖ್ಯೆ ಪರಿಶೀಲಿಸುವ, ವಾಹನ ಸಾಮರ್ಥ್ಯವನ್ನು ಪರಿಶೀಲಿಸುವ ಆಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಕಾರಿಡಾರ್ ಗಳಿಗೆ ವಿಶೇಷವಾದ ಸೂಚನಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು.
ಅವರು ಬೆಂಗಳೂರು ನಗರ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ವಾಹನ ದಟ್ಟಣೆ ನಿರ್ವಹಣೆಗೆ ಕ್ರಮ:
ಬೆಂಗಳೂರು ನಗರದ ವಾಹನ ದಟ್ಟಣೆ ನಿರ್ವಹಣೆಗಾಗಿ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಉನ್ನತ ಮಟ್ಟದ ನಿರ್ವಹಣೆಗಾಗಿ ವಿಶೇಷ ಆಯುಕ್ತರು ಕಾರ್ಯನಿರ್ವಹಿಸುತ್ತಿದ್ದಾರೆ. ಸುಗಮ ಸಂಚಾರ ಹಾಗೂ ವಾಹನ ದಟ್ಟಣೆ ಕಡಿಮೆಗೊಳಿಸಲು ನೂತನ ತಂತ್ರಜ್ಞಾನದ ಕ್ಯಾಮೆರಾ ಅಳವಡಿಸಲಾಗುತ್ತಿದೆ ಎಂದರು.
6 ಹೊಸ ಸಂಚಾರ ಪೊಲೀಸ್ ಠಾಣೆ:
ಎರಡು ಸಂಚಾರ ಪೊಲೀಸ್ ಠಾಣೆಯ ಅಂತರದಲ್ಲಿ ಉಂಟಾಗುವ ವಾಹನದಟ್ಟಣೆಯ ನಿರ್ವಹಣೆಗೆ ನಾಲ್ಕು ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದ್ದು, 2023-24 ರಲ್ಲಿ 6 ಹೊಸ ಸಂಚಾರ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ನಗರದ ಕಾನೂನು ಸುವ್ಯವಸ್ಥೆಗಾಗಿ 9 ಹೊಸ ಪೊಲೀಸ್ ಠಾಣೆಗಳನ್ನು ಮಾಡಲಾಗುವುದು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw