ತಟ್ಟೆ ತೊಳೆಯುವ ವಿಚಾರದಲ್ಲಿ ಕಾರ್ಮಿಕರ ಗಲಾಟೆ: ಓರ್ವನ ಕೊಲೆಯಲ್ಲಿ ಅಂತ್ಯ
ಊಟದ ತಟ್ಟೆ ತೊಳೆಯುವ ವಿಚಾರದಲ್ಲಿ ಉತ್ತರ ಭಾರತ ಮೂಲದ ಕಾರ್ಮಿಕರಿಬ್ಬರ ನಡುವೆ ಜಗಳ ನಡೆದು, ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ಗ್ರಾಮದ ಕೊಸ್ಟಲ್‌ಗಾರ್ಡ್ ಸೈಟ್ ಬಳಿ ನಡೆದಿದೆ.
ಸಂಜಯ್ ಮೃತ ವ್ಯಕ್ತಿ. ಕ್ಷುಲ್ಲಕ ವಿಚಾರಕ್ಕಾಗಿ ಕೂಲಿ ಕಾರ್ಮಿಕರಾದ ಸಂಜಯ್ ಹಾಗೂ ಸೋಹಾನ್ ಯಾದವ್ ನಡುವೆ ಪರಸ್ಪರ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ಸೋಹನ್ ಎಂಬಾತ ಸಂಜಯ್ ರನ್ನು ಬಲವಾಗಿ ನೆಲಕ್ಕೆ ದೂಡಿದ ಪರಿಣಾಮ ನೆಲಕ್ಕೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ಘಟನೆಯ ಬಳಿಕ ಪರಾರಿಯಾಗಿದ್ದ ಆರೋಪಿತ ಸೋಹನ್ ಯಾದವ್‌ನನ್ನು ಮಂಗಳೂರು ರೈಲ್ವೆ ನಿಲ್ದಾಣದ ಬಳಿ ಬಜಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw