ವೇಶ್ಯಾವಾಟಿಗೆ ಅಡ್ಡೆಗೆ ಪೊಲೀಸರ ದಾಳಿ: ಮಹಿಳೆ ಅರೆಸ್ಟ್, ಪಿಂಪ್ ಪರಾರಿ
ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಮುಖ ಆರೋಪಿಯಾಗಿರುವ ಮಹಿಳೆಯೊಬ್ಬರನ್ನು ಬಂಧಿಸಿದ ಘಟನೆ ಮಂಗಳೂರು ಉಳ್ಳಾಲ ತಾಲೂಕಿನ ಪೆರ್ಮನ್ನೂರು ಗ್ರಾಮದ ಪಂಡಿತ್ ಹೌಸ್ ಎಂಬಲ್ಲಿ ನಡೆದಿದೆ.
ಈ ವೇಳೆ ಪಿಂಪ್ ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಖಚಿತ ಮಾಹಿತಿಯನ್ನು ಆಧರಿಸಿ ಈ ಕಾರ್ಯಾಚರಣೆ ನಡೆದಿದ್ದು, ಆರೋಪಿಗಳಿಗೆ ಸೇರಿದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂ. ಮೌಲ್ಯದ ಸೊತ್ತನ್ನ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw