ಪಿಯುಸಿ ಪರೀಕ್ಷೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 242 ವಿದ್ಯಾರ್ಥಿಗಳು ಗೈರು
ಇಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 242 ವಿದ್ಯಾರ್ಥಿಗಳು ಗೈರಾಗಿದ್ದಾರೆ.
ಕನ್ನಡ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 19,385 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 19,169 ವಿದ್ಯಾರ್ಥಿಗಳು ಹಾಜರಾಗಿದ್ದರೆ, 216 ಮಂದಿ ಗೈರಾಗಿದ್ದಾರೆ. ಕನ್ನಡ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 120 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 94 ವಿದ್ಯಾರ್ಥಿಗಳು ಹಾಜರಾಗಿದ್ದರೆ, 26 ಮಂದಿ ಗೈರಾಗಿದ್ದಾರೆ. ಅರಬಿಕ್ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 134 ವಿದ್ಯಾರ್ಥಿಗಳೆಲ್ಲರೂ ಹಾಜರಾಗಿದ್ದಾರೆ.
ಬೆಳಗ್ಗೆ 10.15ಕ್ಕೆ ಆರಂಭಗೊಂಡ ಪರೀಕ್ಷೆಯು 1.15ಕ್ಕೆ ಮುಕ್ತಾಯಗೊಂಡಿದ್ದು, ಎಲ್ಲವೂ ಸುಸೂತ್ರವಾಗಿ ನಡೆದಿದೆ ಎಂದು ಡಿಡಿ ಪಿಯು ಮಾಹಿತಿ ನೀಡಿದ್ದಾರೆ. ಮಾರ್ಚ್ 10ರಂದು ಯಾವುದೇ ಪರೀಕ್ಷೆ ನಡೆಯುವುದಿಲ್ಲ. ಮಾರ್ಚ್ 11ರಂದು ಗಣಿತ ಶಾಸ್ತ್ರ ಮತ್ತು ಶಿಕ್ಷಣ ಶಾಸ್ತ್ರ ಪರೀಕ್ಷೆ ನಡೆಯಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw