Breaking News… 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ
ಬೆಂಗಳೂರು: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ (Board exams) ರದ್ದು ಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ ಹೊರಡಿಸಲಾಗಿದೆ.
ನಿಯಮಗಳಿಗನುಸಾರ ಮುಂದಿನ ಶೈಕ್ಷಣಿಕ ವರ್ಷದಿಂದ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮಾ.13ರಿಂದ 5, 8ನೇ ತರಗತಿ ಪರೀಕ್ಷೆಗಳು ಆರಂಭವಾಗಬೇಕಿತ್ತು. ಆದರೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಶೈಕ್ಷಣಿಕ ವರ್ಷದಿಂದ 5, 8ನೇ ತರಗತಿ ಪಬ್ಲಿಕ್ ಪರೀಕ್ಷೆ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿದ್ದು, ಬೋರ್ಡ್ ಎಕ್ಸಂಗೆ ತಡೆ ನೀಡುವ ಮೂಲಕ ಹೈಕೋರ್ಟ್ ಶಿಕ್ಷಣ ಇಲಾಖೆಗೆ ಸೂಚಿಸಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ನಮಗೆ ಈ ಬಗ್ಗೆ ಮಾಹಿತಿ ಬಂದಿದೆಯಷ್ಡೇ.
. ವಿವರವಾದ ಆದೇಶ ಕೈ ಸೇರಿದ ಮೇಲೆ ಮಾಹಿತಿ ನೀಡುತ್ತೇವೆ. ಆದರೆ ವಿವರವಾದ ಆದೇಶ ಬಂದ ಮೇಲೆ ಯಾವ ಕ್ರಮ ತಗೆದುಕೊಳ್ಳಬೇಕು ಎಂದು ಚರ್ಚಿಸಿ ತಿಳಿಸುವುದಾಗಿ ಮಾಹಿತಿ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw