ಧ್ರುವ ನಾರಾಯಣ್ ನಿಧನದ ಹಿನ್ನೆಲೆ: ಪ್ರಜಾಧ್ವನಿ ಕಾರ್ಯಕ್ರಮ ರದ್ದು
ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ರಾಮನಗರ ಕ್ಷೇತ್ರದ ಮೂರು ಕಡೆ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ರಾಮನಗರ ತಾಲೂಕಿನ ಮರಳವಾಡಿ, ಹಾರೋಹಳ್ಳಿ ಹಾಗೂ ರಾಮನಗರ ಜೂನಿಯರ್ ಕಾಲೇಜು ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಧ್ರುವ ನಾರಾಯಣ್ ಅವರ ನಿಧನದಿಂದಾಗಿ ಪ್ರಜಾಧ್ವನಿ ಕಾರ್ಯಕ್ರಮ ಮುಂದೂಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಂಸದ ಡಿಕೆ ಸುರೇಶ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ ಯಾತ್ರೆ ರದ್ದು ಮಾಡಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನ ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw