ಮಣ್ಣಲ್ಲಿ -ಮಣ್ಣಾದ ಧ್ರುವನಾರಾಯಣ: ಜನನಾಯಕನಿಗೆ ಅಶೃತರ್ಪಣ, ಸ್ನೇಹಿತನಿಗೆ ಹೆಗಲು ಕೊಟ್ಟ ಡಿಕೆಶಿ - Mahanayaka
5:34 AM Thursday 12 - December 2024

ಮಣ್ಣಲ್ಲಿ –ಮಣ್ಣಾದ ಧ್ರುವನಾರಾಯಣ: ಜನನಾಯಕನಿಗೆ ಅಶೃತರ್ಪಣ, ಸ್ನೇಹಿತನಿಗೆ ಹೆಗಲು ಕೊಟ್ಟ ಡಿಕೆಶಿ

dhruvanarayan
12/03/2023

ಚಾಮರಾಜನಗರ: ನಾಡಿನ ಧೀಮಂತ ನಾಯಕ, ರಾಜಕಾಣರದಲ್ಲಿದ್ದ ಸಜ್ಜನೀಯ ವ್ಯಕ್ತಿ, ಅಜಾತಶತ್ರು ಆರ್.ಧ್ರುವನಾರಾಯಣ ಇಂದು ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದ ತೋಟದಲ್ಲಿ ಮಣ್ಣಲ್ಲಿ ಮಣ್ಣಾದರು.

ರೋಧನ, ನೆಚ್ಚಿನ ನಾಯಕನನ್ಬು ಕಳೆದುಕೊಂಡ ನೋವು, ಪಕ್ಷದ ಗೆಳೆಯನನ್ನು ಕಳೆದುಕೊಂಡ ಬೇಸರ ಹೀಗೆ ನೂರಾರು ದುಃಖ ಹೊತ್ತ ಸಾವಿರಾರು ಕಣ್ಣುಗಳು ಕಂಬನಿ ಹಾಕುತ್ತ ರಾಜಕೀಯ ಧ್ರುವತಾರೆಯನ್ನು ಭಾರದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು.

ಶನಿವಾರ ತಡರಾತ್ರಿ ಚಾಮರಾಜನಗರಕ್ಕೆ ಪಾರ್ಥಿವ ಶರೀರ ಬಂದಿತ್ತು‌. ಜಿಲ್ಲಾಕೇಂದ್ರದಲ್ಲಿ ಮೆರವಣಿಗೆ ನಡೆಸಿದ ಬಳಿಕ ಹುಟ್ಟೂರಿಗೆ ಪಾರ್ಥಿವ ಶರೀರ ತಂದು ಡಾ‌‌.ಬಿ‌.ಆರ್.ಅಂಬೇಡ್ಕರ್ ಭವನ ಸಮೀಪ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.

ಹಳ್ಳಿ-ಹಳ್ಳಿಗಳಿಂದ ಬಂದ ಜನಸಾಗರ:

ಅಜಾತಶತೃ, ಸಜ್ಜನ ರಾಜಕಾರಣಿ ಹಾಗೂ  ಜನನಾಯಕನಿಗೆ ಅಂತಿಮ ನಮನ ಸಲ್ಲಿಸಲು ಹಳ್ಳಿ-ಹಳಿಗಳಿಂದ ಜನರು ಆಟೋ, ಪಿಕ್ ಅಪ್ ವಾಹನಗಳನ್ನು ಮಾಡಿಕೊಂಡು ತಂಡೊಪತಂಡವಾಗಿ ಬಂದು ಅಂತಿಮ ನಮನ ಸಲ್ಲಿಸಿದರು‌‌.

ಅಂತಿಮ ನಮನ ಕಾರ್ಯಕ್ರಮದಲ್ಲಿ   ಸಿದ್ದರಾಮಯ್ಯ ಹಾಗೂ ಡಿಕೆಶಿ ಪಾಲ್ಗೊಂಡಿದ್ದಾರೆ. ಪುತ್ರ ದರ್ಶನ ಭುಜ ತಟ್ಟಿ ಸಮಾಧಾನ ಪಡಿಸಿಸ ಸಿದ್ದರಾಮಯ್ಯ ಅಂತಿಮ-ವಿಧಾನದ ಬಗ್ಗೆ ಮಾಹಿತಿ ಪಡೆದರು. ನಂತರ, ಡಿಕೆಶಿ ಕಾಂಗ್ರೆಸ್ ಧ್ವಜವನ್ನು ಪಾರ್ಥೀವ  ಶರೀರದ ಮೇಲೆ ಹೊದಿಸಿ ಬಿಕ್ಕಿ-ಬಿಕ್ಕಿ ಅತ್ತರು. ಕಾಂಗ್ರೆಸ್ ನಾಯಕರುಗಳು ಕುಟುಂಬಸ್ಥರಿಗೆ ಸಮಾಧಾನ ಪಡಿಸುತ್ತಿದುದು ಸಾಮಾನ್ಯವಾಗಿತ್ತು.

ಸರ್ಕಾರಿ ಗೌರವ:

ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ಮಾಜಿ ಸಂಸದ ಧ್ರುವನಾರಾಯಣ ಅವರಿಗೆ ಸರ್ಕಾರಿ ಗೌರವವನ್ನು ಸಲ್ಲಿಸಲಾಯಿತು. ಚಾಮರಾಜನಗರ ಪೊಲೀಸ್ ಇಲಾಖೆಯು ಗಾಳಿಗೆ ಗುಂಡು ಹಾರಿಸಿ ಗೌರವ ನಮನ ಸಲ್ಲಿಸಿತು.

ಜಿಲ್ಲಾಡಳಿತ ವತಿಯಿಂದ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿಕೆಶಿ, ಶಾಸಕರುಗಳು ಪುಷ್ಪ ಮಾಲೆ ಅರ್ಪಿಸಿ ಅಂತಿಮ ಗೌರವ ಸಲ್ಲಿಸಿದರು.

ತಂದೆ-ತಾಯಿ ಪಕ್ಕ ಸಮಾಧಿ:

ಧ್ರುವನಾರಾಯಣ ಅವರ ತಂದೆ-ತಾಯಿ ಪಕ್ಕವೇ ಧ್ರುವ ಅವರ ಅಂತ್ಯಕ್ರಿಯೆ ನಡೆಯಿತು. ಹಿಂದೂ ಧಾರ್ಮಿಕ ವಿಧಿ ವಿಧಾನದಂತೆ ಕುರ್ಜು ಕಟ್ಟಿ ಧ್ರುವ ಅವರ ಅಂತಿಮ  ಮೆರವಣಿಗೆ ನಡೆಸಿ ಬಳಿಕ ಮಣ್ಣು ಮಾಡಲಾಯಿತು.  ಪತ್ನಿ ವೀಣಾ ಮಕ್ಕಳಾದ ದರ್ಶನ್, ಧೀರನ್ ಶೋಕ ಸಾಗರದಲ್ಲಿ ಮುಳುಗಿದ್ದರು. ಧ್ರುವನಾರಾಯಣ ಅವರ ಪಾರ್ಥೀವ ಶರೀರಕ್ಕೆ ಡಿ.ಕೆ‌.ಶಿವಕುಮಾರ್ ಹೆಗಲು ಕೊಟ್ಟು ಮೂರು ಸುತ್ತು ಬಂದರು.

ಭಾಗಿಯಾಗಿದ್ದ ನಾಯಕರು: ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ಕೈ ಮುಖಂಡರುಗಳಾದ ಸಲೀಂ ಅಹ್ಮದ್, ಡಿ.ಕೆ.ಸುರೇಶ್, ದಿನೇಶ್ ಗುಂಡೂರಾವ್, ಕೆ.ಎಚ್‌.ಮುನಿಯಪ್ಪ, ಸತೀಶ್ ಜಾರಕಿಹೊಳಿ, ವಿಶ್ವನಾಥ್, ರೋಜಿ ಜಾನ್, ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು, ಸಿ‌.ಪುಟ್ಟರಂಗಶೆಟ್ಟಿ, ಆರ್.ನರೇಂದ್ರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ