ಸೋಮಣ್ಣ ಮುನಿಸಿಗೆ ಹೈಕಮಾಂಡ್ ಮುಲಾಮು: ಚಾಮರಾಜನಗರಸಾರಥ್ಯ
ಚಾಮರಾಜನಗರ: ಹಳೇ ಮೈಸೂರು ಪ್ರಾಂತ್ಯದ ಮೇಲೆ ಕಣ್ಣಿಟ್ಟಿರುವ ಬಿಜೆಪಿ. ಈ ಬಾರಿ ಶತಾಯ ಗತಾಯ ಹೆಚ್ಚಿನ ಸ್ಧಾನ ಗೆಲ್ಲಲೇ ಬೇಕು ಸರ್ಕಸ್ ಮಾಡುತ್ತಿದೆ. ಆದರೆ, ಇದುವರಗೆ ಮಾಡಿದ ತಂತ್ರಗಳು ಕೈ ಹಿಡಿಯುತ್ತಿಲ್ಲ. ಸಾರಥ್ಯ ವಹಿಸಿಕೊಳ್ಳಲು ಯಾವ ನಾಯಕರು ಮುಂದೆ ಬರುತ್ತಿಲ್ಲ. ಇದೀಗ ಬಿಜೆಪಿಯೊಂದಿಗಿನ ವಸತಿ ಸಚಿವ ವಿ. ಸೋಮಣ್ಣ ಅವರ ಮುನಿಸು ಶಮನವಾಗಿದ್ದು, ಹಳೇ ಮೈಸೂರು ಪ್ರಾಂತ್ಯದಲ್ಲಿ ಅದರಲ್ಲೂ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿ ಉಸ್ತುವಾರಿ ನೀಡಲು ಹೈಕಮಾಂಡ್ ಒಲವು ತೋರಿದೆ.
ಬಿಜೆಪಿ ಉನ್ನತ ಮೂಲಗಳ ಪ್ರಕಾರ, ಸೋಮಣ್ಣ ಮುನಿಸಿಗೆ ಸಾರಥ್ಯ ವಹಿಸಿಕೊಡುವ ಮುಲಾಮು ಹಚ್ಚಿದೆ. ನಾಲ್ಕು ದಶಕಗಳ ಸೋಮಣ್ಣ ಅವರ ಸುದೀರ್ಘ ರಾಜಕಾರಣದಲ್ಲಿ ಚಾಮರಾಜನಗರ ಜಿಲ್ಲೆಯೊಂದಿಗೆ ಎರಡು ದಶಕಗಳ ಒಡನಾಟ ಹೊಂದಿರುವ ಸೋಮಣ್ಣ ಅವರು ಎರಡು ಬಾರಿ ಚಾಮರಾಜನಗರ, ಒಮ್ಮೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ, ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷದಲ್ಲೂ ಚುನಾವಣಾ ಉಸ್ತುವಾರಿ ವಹಿಸಿಕೊಂಡಿದ್ದು, ಈ ಹಿಂದೆ ಚಾಮುಂಡೇಶ್ವರಿ ಮತ್ತು ನಂಜನಗೂಡು ಉಪ ಚುನಾವಣೆಯಲ್ಲೂ ಕೆಲಸ ಮಾಡಿದ್ದಾರೆ. ಆದರೆ, ಈ ಭಾಗದ ಚುನಾವಣಾ ಸಾರಥ್ಯ ಮಾತ್ರ ಸಿಕ್ಕಿರಲಿಲ್ಲ.
ಈ ಭಾಗದಲ್ಲಿ ನಾಯಕತ್ವದ ಕೊರತೆಯಿಂದಾಗಿ ಬಿಜೆಪಿ ಅಲೆ ಇದ್ದ ಕಾಲದಲ್ಲೂ ಒಂದು – ಎರಡು ಸ್ಧಾನಕಷ್ಟೇ ಬಿಜೆಪಿ ತೃಪ್ತಿಪಟ್ಟಿಕೊಳ್ಳುತ್ತಿದ್ದು, ವಿಧಾನಸಭಾ ವಿರೋಧಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಾಬಲ್ಯವಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಸ್ಧಾನ ಗೆಲ್ಲಲೇಬೇಕು ಎಂದು ಹಠಕ್ಕೆ ಬಿದ್ದಿರುವ ಬಿಜೆಪಿ ಈ ಭಾಗದ ಉಸ್ತುವಾರಿ ಸಚಿವರಾಗಿ ಅನುಭವ ಹೊಂದಿರುವ ವಿ. ಸೋಮಣ್ಣ ಅವರಿಗೆ ಸಾರಥ್ಯ ನೀಡಲು ಅಳೆದು ತೂಗಿ ನಿರ್ಧಾರ ಕೈಗೊಂಡಿದೆ. ಇದರೊಟ್ಟಿಗೆ, ಸೋಮಣ್ಣಗೆ ಹಿಡಿತವಿರುವ ಚಾಮರಾಜನಗರ ಭಾಗದಲ್ಲಿ ಸಾರಥ್ಯ ಕೊಟ್ಟಂತೆಯೂ ಆಗಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw