ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ: ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ 2.30 ಕೋಟಿ ಬೆಲೆ ಬಾಳುವ ಚಿನ್ನದ ಬಿಸ್ಕೆಟ್, ಸರ ವಶ

ಚಿಕ್ಕಮಗಳೂರು : ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕೋಟ್ಯಾಂತರ ಮೌಲ್ಯದ ಚಿನ್ನವನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.
ಪಿಕಪ್ ವಾಹನದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ ಸಾಗಿಸಲಾಗುತ್ತಿತ್ತು. ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ಮಾಡುವಾಗ ಚಿನ್ನ ಪತ್ತೆಯಾಗಿದೆ.
2 ಕೋಟಿ 30 ಲಕ್ಷ ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಪಿಕಪ್ ವಾಹನದಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನದ ಸರ, ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ.
ನಾಲ್ಕು ಬಾಕ್ಸ್ ನಲ್ಲಿ ಚಿನ್ನವನ್ನ ಪಿಕಪ್ ವಾಹನದಲ್ಲಿ ತರುತ್ತಿದ್ದ ಇಬ್ಬರು ಹಾಗೂ ಪಿಕಪ್ ವಾಹನ ಚಾಲಕಸೇರಿದಂತೆ ಇಬ್ಬರನ್ನ ವಶಕ್ಕೆ ಪಡೆದು ಎಸ್ಪಿ ಮಾಹಿತಿ ಸಂಗ್ರಹಿಸಿದ್ದಾರೆ.
ತರೀಕೆರೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನ ಪತ್ತೆಯಾಗಿದೆ. ತರೀಕೆರೆ ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ಘಟನೆ ಈ ಘಟನೆ ನಡೆದಿದೆ. ಚುನಾವಣೆ ನಿಮಿತ್ತ ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw