ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಲಕ್ಷ ರೂ. ಹಣ ವಶಕ್ಕೆ ಪಡೆದ ಪೊಲೀಸರು - Mahanayaka

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಲಕ್ಷ ರೂ. ಹಣ ವಶಕ್ಕೆ ಪಡೆದ ಪೊಲೀಸರು

police
26/03/2023

ಮಲ್ಪೆ: ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಹಣವನ್ನು ಮಲ್ಪೆ ಪೊಲೀಸರು ನೇಜಾರು ಚೆಕ್ ಪೋಸ್ಟ್ನಲ್ಲಿ ಮಾ.24ರಂದು ವಶಪಡಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

ಕೆಮ್ಮಣ್ಣು ಕಡೆಯಿಂದ ಸಂತೆಕಟ್ಟೆ ಕಡೆಗೆ ಸಂತೋಷ್, ಕಿರಣ್ ಲೋಬೋ ಹಾಗೂ ರೇಖಾ ಲೋಬೋ ಎಂಬವರು ಪ್ರಯಾಣಿಸುತ್ತಿದ್ದು, ಈ ವೇಳೆ ಚೆಕ್ ಪೋಸ್ಟ್ನಲ್ಲಿ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಕಾರಿನ ಹಿಂಬದಿಯ ಡಿಕ್ಕಿನಲ್ಲಿ ಒಟ್ಟು 4 ಲಕ್ಷ ರೂ. ಹಣ ದೊರೆತಿದೆ ಎಂದು ತಿಳಿದುಬಂದಿದೆ.

ಸಂಬಂಧಪಟ್ಟವರು ಇದಕ್ಕೆ ಯಾವುದೇ ದಾಖಲಾತಿ ನೀಡದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ