ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲೆಸೆತ ಖಂಡನೀಯ: ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ಶಿಕಾರಿಪುರದಲ್ಲಿ ಬಿಜೆಪಿ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಯ ಮೇಲೆ ಕಲ್ಲೆಸೆತದ ದುಷ್ಕೃತ್ಯ ಖಂಡನೀಯ. ಕಿಡಿಗೇಡಿಗಳ ಈ ಕುಕೃತ್ಯವನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಇಂಥ ದುಷ್ಕೃತ್ಯಕ್ಕೆ ಯಾರೂ ಬೆಂಬಲ ಕೊಡಬಾರದು. ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯವ ಕೆಲಸದಲ್ಲಿ ಭಾಗಿಯಾಗಬೇಕು ಎಂದು ಅವರು ತಿಳಿಸಿದ್ದಾರೆ.
ಇದು ಸಂವಿಧಾನಕ್ಕೆ ಅಗೌರವ ತರುವ ಕಾರ್ಯವಾಗಿದೆ. ಯಾರೇ ತಪ್ಪು ಮಾಡಿದ್ದರೂ ಅದನ್ನು ಸರಕಾರ ಪತ್ತೆ ಮಾಡಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಮೀಸಲಾತಿಯ ವಿಚಾರದಲ್ಲಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರ ಅತ್ಯಂತ ವಿವೇಚನಾಪೂರ್ಣ ನಿರ್ಣಯ ಪ್ರಕಟಿಸಿದೆ. ಇದನ್ನು ಎಲ್ಲ ಸಮುದಾಯದವರು ಅರ್ಥ ಮಾಡಿಕೊಂಡು ಶಾಂತಿ ಕಾಪಾಡಬೇಕು. ಒಳ ಮೀಸಲಾತಿ ಬಗ್ಗೆ ತಪ್ಪು ಮಾಹಿತಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw