ಸುಳ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಆರಂಭ: ಅಭ್ಯರ್ಥಿಯ ಬದಲಾವಣೆಗಾಗಿ ಪಟ್ಟು!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ಮಾಡಿದ್ರು.
‘ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’. ‘ನಂದಕುಮಾರ್ ಅವರಿಗೆ ಬಿ ಫಾರ್ಮ್ ಕೊಡಿ, ಸುಳ್ಯದಲ್ಲಿ ಕಾಂಗ್ರೆಸ್ ಗೆಲ್ಲಿಸಿಕೊಡುತ್ತೇವೆ’ ಎಂದು ಕಾಂಗ್ರೆಸ್ ಕಾರ್ಯಕರ್ತರು ಫಲಕಗಳನ್ನು ಹಿಡಿದು ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ಕುಳಿತರು. ಈ ಕುರಿತು ಪಕ್ಷದ ವರಿಷ್ಠರು ನ್ಯಾಯ ನೀಡಬೇಕು ಎಂದು ಪಟ್ಟು ಹಿಡಿದ ಘಟನೆ ನಡೆಯಿತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw