ವಿಧಾನಸಭೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನೋಡಬಾರದ್ದನ್ನು ನೋಡಿದ ಬಿಜೆಪಿ ಶಾಸಕ!
ತ್ರಿಪುರ: ವಿಧಾನಸಭೆಯಲ್ಲಿ ಬಿಜೆಪಿ ಶಾಸಕನೋರ್ವ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿರುವ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿಗೆ ತೀವ್ರ ಮುಜುಗರ ಉಂಟಾಗಿದೆ.
ತ್ರಿಪುರಾದ ಬಾಗ್‌ಬಾಸಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜದಾಬ್ ಲಾಲ್ ನಾಥ್ ಅವರು ವಿಧಾನ ಸಭೆಯಲ್ಲಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವ ದೃಶ್ಯ ವೈರಲ್ ಆಗಿದೆ. ಈ ವಿಡಿಯೋ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಪಿಎಂನ ಬಲಿಷ್ಠ ಕೋಟೆಗಳಲ್ಲಿ ಕಣಕ್ಕಿಳಿದಿರುವ ಬಗ್ಬಾಸಾ ವಿಧಾನಸಭಾ ಕ್ಷೇತ್ರದಲ್ಲಿ ಜದಬ್ ಲಾಲ್ ನಾಥ್ ಬಿಜೆಪಿ ಗೆಲುವಿನ ಪತಾಕೆ ಹಾರಿಸಿದ್ದರು. ಆದರೆ ಇದೀಗ ಅವರು ಅಶ್ಲೀಲ ಚಿತ್ರವನ್ನು ವೀಕ್ಷಿಸುವ ಮೂಲಕ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw