ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಜನರಿಗೆ ತೊಂದರೆ ಕೊಡುವುದನ್ನು ನಿಲ್ಲಿಸಿ: ವಿಪಕ್ಷ ಉಪನಾಯಕ ಯು.ಟಿ.ಖಾದರ್
ಜಿಲ್ಲಾದ್ಯಂತ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸಮಸ್ಯೆಗೆ ಕ್ಷಿಪ್ರಗತಿಯಲ್ಲಿ ಪರಿಹಾರ ಕಂಡುಕೊಳ್ಳಲು ಜನಪ್ರತಿನಿಧಿಗಳಿಗೆ ಸಾಧ್ಯವಾಗುತ್ತಿಲ್ಲ. ಮುಖ್ಯಮಂತ್ರಿ ಸಹಿತ ಸಚಿವರು ಚುನಾವಣಾ ಪ್ರಚಾರದಲ್ಲಿ ಮಗ್ನರಾಗಿದ್ದರೇ ವಿನಃ ನೀತಿ ಸಂಹಿತೆ ಜಾರಿಗೆ ಮುನ್ನ ಮೂಲಭೂತ ಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಿಲ್ಲ. ಚುನಾವಣಾ ನೀತಿ ಸಂಹಿತೆಯ ನೆಪದಲ್ಲಿ ಜನರಿಗೆ ತೊಂದರೆ ಕೊಡುವುದನ್ನು ಅಧಿಕಾರಿಗಳು ನಿಲ್ಲಿಸಬೇಕು. ನೀತಿ ಸಂಹಿತೆಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳು ಕಿರಿಯ ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ರಾಜ್ಯ ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ.
ಅವರು ಮಂಗಳೂರು ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸುವ ಭರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್ ಗಳನ್ನು ತೆರವುಗೊಳಿಸಿರುವುದು ಸರಿಯಲ್ಲ. ಆ ಬ್ಯಾನರ್ ನಲ್ಲಿ ರಾಜಕಾರಣಿಗಳ, ಜನಪ್ರತಿನಿಧಿಗಳ ಫೋಟೊ, ಅನುದಾನ ಇತ್ಯಾದಿ ವಿವರಗಳಿದ್ದರೆ ತೆರವುಗೊಳಿಸಲಿ. ಅದು ಬಿಟ್ಟು ಕೇವಲ ಧಾರ್ಮಿಕ ಕಾರ್ಯಕ್ರಮಗಳ ಬ್ಯಾನರ್ ಗಳನ್ನು ತೆರವುಗೊಳಿಸುತ್ತಿರುವುದು ಅಕ್ಷಮ್ಯ ಎಂದು ಅವರು ಹೇಳಿದರು.
ಅಧಿಕಾರಿ, ಸಿಬ್ಬಂದಿ ವರ್ಗಕ್ಕೆ ಮಾಹಿತಿಯ ಕೊರತೆ ಇರುವುದರಿಂದಲೇ ಈ ಸಮಸ್ಯೆ ಸೃಷ್ಟಿಯಾಗಿದೆ. ಗೊಂದಲವೂ ನಿರ್ಮಾಣವಾಗಿದೆ. ಈ ಬಗ್ಗೆ ಮಾಹಿತಿ ಪಡೆಯಲು ಮತ್ತು ನಿಯಮ ಮೀರಿ ಕಾರ್ಯಾಚರಿಸುವ ಅಧಿಕಾರಿ, ಸಿಬ್ಬಂದಿ ವರ್ಗದ ವಿರುದ್ಧ ದೂರು ಸಲ್ಲಿಸಲು ನಿಯಂತ್ರಣ ಕೊಠಡಿ ತೆರೆಯಬೇಕು ಎಂದರು. ಇನ್ನು ಸರಕಾರದ ನಿರ್ಲಕ್ಷ್ಯದಿಂದ ಇದೀಗ ಜನಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಜಿಲ್ಲಾಡಳಿತವು ಶೀಘ್ರ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw