ಮೀನುಗಾರರಿಗೆ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ, ಬಿಜೆಪಿ ಟಿಕೆಟ್ ನೀಡಬೇಕು: ರಾಮಚಂದರ್ ಒತ್ತಾಯ
ಮಂಗಳೂರು: ನಗರ ವ್ಯಾಪ್ತಿಯ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಮಂಗಳೂರು (ಉಳ್ಳಾಲ) ಮತ್ತು ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರಗಳಲ್ಲಿ ಮೀನುಗಾರರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸದಸ್ಯ ರಾಮಚಂದರ್ ಬೈಕಂಪಾಡಿ ಆಗ್ರಹಿಸಿದ್ದಾರೆ.
ಅವರು ಮಂಗಳೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮೀನುಗಾರ ಸಮುದಾಯದವರಿಗೆ ಯಾವ ರಾಜಕೀಯ ಪಕ್ಷದಿಂದಲೂ ಸ್ಥಾನ–-ಮಾನ ಸಿಗಲಿಲ್ಲ. ಈ ಭಾಗದ ಮೀನುಗಾರರ ಪೈಕಿ ಶೇಕಡ 80ರಷ್ಟು ಮಂದಿ ಹಿಂದುತ್ವದ ಆಧಾರದಲ್ಲಿ ಇಷ್ಟು ವರ್ಷ ಬಿಜೆಪಿಗೆ ಮತ ಚಲಾಯಿಸುತ್ತಿದ್ದಾರೆ. ಆದರೂ ರಾಜಕೀಯ ಪ್ರಾತಿನಿಧ್ಯ ಸಿಕ್ಕಿದ್ದು ಕಡಿಮೆ ಎಂದು ದೂರಿದರು.
ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಮೀನುಗಾರ ಸಮುದಾಯದವರ ಪ್ರಭಾವ ಇದ್ದು ಮಂಗಳೂರು ಉತ್ತರ, ಮೀನುಗಾರರ ಸಾಂಪ್ರದಾಯಿಕ ಕ್ಷೇತ್ರವಾಗಿದ್ದು ಮೀನುಗಾರರು ಬಿಜೆಪಿಯನ್ನು ಬೆಂಬಲಿಸುತ್ತ ಬಂದಿದ್ದಾರೆ. ಆದರೂ ಶಾಸಕರಾಗಲು ಸಾಧ್ಯವಾಗಲಿಲ್ಲ. ಈ ಬಾರಿ ಕನಿಷ್ಠ ಎರಡು ಕ್ಷೇತ್ರಗಳಲ್ಲಿ ಸಮುದಾಯಕ್ಕೆ ಟಿಕೆಟ್ ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯ ಘಟಕದ ಅಧ್ಯಕ್ಷರನ್ನು ಕೋರಲಾಗಿದೆ ಎಂದರು.
ಮೀನುಗಾರರಿಗೆ ಟಿಕೆಟ್ ನೀಡದೇ ಇದ್ದರೆ ಚುನಾವಣೆಯ ಸಂದರ್ಭದಲ್ಲಿ ಮೀನುಗಾರರು ತಟಸ್ಥರಾಗಿರುವರು ಎಂದು ಎಚ್ಚರಿಕೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw