ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತ ಬಾಂಧವರಿಂದ ಶ್ರದ್ಧಾಭಕ್ತಿಯಿಂದ ಪಾಮ್ ಸಂಡೆ ಆಚರಣೆ - Mahanayaka
1:01 AM Saturday 14 - December 2024

ಉಡುಪಿ ಜಿಲ್ಲೆಯಲ್ಲಿ ಕ್ರೈಸ್ತ ಬಾಂಧವರಿಂದ ಶ್ರದ್ಧಾಭಕ್ತಿಯಿಂದ ಪಾಮ್ ಸಂಡೆ ಆಚರಣೆ

palm sunday
02/04/2023

ಉಡುಪಿ : ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್‌ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್‌ ಐಸಾಕ್‌ ಲೋಬೊ ಅವರು ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿದರು. ಈ ವೇಳೆ ಚರ್ಚ್‌ನ ಪ್ರಧಾನ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್, ಉಡುಪಿ ಧರ್ಮಪ್ರಾಂತ್ಯದ ಕುಲಪತಿ ವಂ|ಡಾ|ರೋಶನ್ ಡಿ’ಸೋಜಾ, ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ | ಜೋನ್ಸನ್ ಎಲ್ ಸಿಕ್ವೇರಾ, ಹಿರಿಯ ಧರ್ಮಗುರು ವಂ |ವಿಲಿಯಂ ಮಾರ್ಟಿಸ್ ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯ ಎಲ್ಲ ಚರ್ಚ್‌ಗಳಲ್ಲಿ ಕ್ರೈಸ್ತ ಬಾಂಧವರು ಬೆಳಗ್ಗಿನ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದುಕೊಂಡು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಚರ್ಚ್‌ಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು.

ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್‌ ಕ್ಯಾಥೆಡ್ರಲ್‌ನಲ್ಲಿ ದೇವಾಲಯದ ಪ್ರಧಾನ ಧರ್ಮಗುರು ವಂ. ವಲೇರಿಯನ್ ಮೆಂಡೊನ್ಸಾ ಧಾರ್ಮಿಕ ವಿಧಿವಿಧಾನದ ನೇತೃತ್ವ ವಹಿಸಿದ್ದರು.

ಪಾಮ್‌ ಸಂಡೆ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ. ಯೇಸುಕ್ರಿಸ್ತರು ಜೆರುಸಲೇಂ ನಗರವನ್ನು ಪ್ರವೇಶಿಸಿದಾಗ ಅಲ್ಲಿನ ಭಕ್ತರು ಒಲಿವ್‌ ಮರದ ಗರಿಗಳನ್ನು ಹಿಡಿದು ಯೇಸುವಿಗೆ ವೈಭವದಿಂದ ಸ್ವಾಗತಿಸಿದ ಸಂಕೇತವಾಗಿ ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ಮೆರವಣಿಗೆಯಲ್ಲಿ ತೆರಳಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ.

ಪವಿತ್ರ ಸಪ್ತಾಹವು ಕ್ರೈಸ್ತರಿಗೆ ಅತೀ ಮಹತ್ವದಾಗಿದ್ದು, ಗುರುವಾರ ಯೇಸುಕ್ರಿಸ್ತರು ಕೊನೆಯ ಭೋಜನ ಸ್ಮರಣೆ ಮಾಡಿದ್ದರೆ, ಶುಕ್ರವಾರ ಯೇಸುಕ್ರಿಸ್ತರ ಮರಣದ ದಿನವಾದ ಗುಡ್‌ ಫ್ರೈಡೆ ಆಚರಿಸಿ ಇಡೀ ದಿನವನ್ನು ಉಪವಾಸ, ಧ್ಯಾನದಲ್ಲಿ ಕಳೆಯುತ್ತಾರೆ. ಶನಿವಾರ ಈಸ್ಟರ್‌ ಜಾಗರಣೆ ಮತ್ತು ಭಾನುವಾರ ಯೇಸುಕ್ರಿಸ್ತರ ಪುನರುತ್ಥಾನದ ಪ್ರಯುಕ್ತ ಈಸ್ಟರ್‌ ಹಬ್ಬ ಆಚರಿಸಲಾಗುತ್ತದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ