2ನೇ ಪಟ್ಟಿಯಲ್ಲೂ ಮಂಗಳೂರು ಉತ್ತರ—ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರಿಲ್ಲ!
ರಾಜ್ಯ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಸ್ಪರ್ಧಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, 42 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಎರಡನೇ ಪಟ್ಟಿಯಲ್ಲಿಯೂ ಮಂಗಳೂರು ದಕ್ಷಿಣ ಮತ್ತು ಉತ್ತರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿಲ್ಲ. ಮಂಗಳೂರು ದಕ್ಷಿಣದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಮತ್ತು ಪದ್ಮರಾಜ್ ನಡುವೆ ತೀವ್ರ ಪೈಪೋಟಿ ನಡೆದರೆ, ಉತ್ತರದಲ್ಲಿ ಮಾಜಿ ಶಾಸಕ ಮೊಯಿದಿನ್ ಬಾವಾ ಮತ್ತು ಇನಾಯತ್ ಅಲಿ ಮಧ್ಯೆ ಟಿಕೆಟ್ ಗಾಗಿ ಪೈಪೋಟಿ ನಡಯುತ್ತಿದೆ.
ಪ್ರಬಲ ಆಕಾಂಕ್ಷಿಗಳಾದ ಪದ್ಮರಾಜ್ ಮತ್ತು ಮಾಜಿ ಶಾಸಕ ಮೊಯಿದಿನ್ ಬಾವಾ ಅವರು ಈಗಾಗಲೇ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw