ಉಡುಪಿ ಕಾಂಗ್ರೆಸ್ ಗೆ ಬಂಡಾಯದ ಬಿಸಿ: ರಾಜೀನಾಮೆ ನೀಡಿದ ಟಿಕೆಟ್ ಆಕಾಂಕ್ಷಿ!
ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಯಾಗಿದ್ದ ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿ ಸುವುದಾಗಿ ಇಂದು ನಡೆದ ಅಭಿಮಾನಿಗಳ ಸಭೆಯಲ್ಲಿ ಘೋಷಿಸಿದ್ದಾರೆ.
ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಗುರುವಾರ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳಿಂದ ನನ್ನ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಮಥುರಾ ಛತ್ರದಲ್ಲಿ ನಡೆದ ಅಭಿಮಾನಿಗಳ ಸಭೆಯಲ್ಲಿ ಮೊನ್ನೆ ಬಂದವರಿಗೆ ಟಿಕೆಟ್ ನೀಡಿ ನನಗೆ ಅನ್ಯಾಯ ಮಾಡಲಾಗಿದೆ. ಅಭಿಮಾನಿಗಳ ಸಹಕಾರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ. ಸಭೆಯಲ್ಲಿ ನೂರಾರು ಮಂದಿ ಅಭಿಮಾನಿಗಳು ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EOUjVqy3Mmp66N4bRSBoht
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw