ತೊಕ್ಕೊಟ್ಟು : ಅಂಗಡಿಯಲ್ಲೇ ಸಾವಿಗೆ ಶರಣಾದ ಮಾಲಿಕ
ಅಂಗಡಿ ಮಳಿಗೆಯಲ್ಲೇ ಅದರ ಮಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್ ನಲ್ಲಿ ನಡೆದಿದೆ.
ತೊಕ್ಕೊಟ್ಟಿನ ನ್ಯೂ ಥ್ರೆಡ್ ಹೌಸ್ ನ ಮಾಲಕ ಪ್ರವೀಣ್ ಆಳ್ವ( 44), ಆತ್ಮಹತ್ಯೆ ಮಾಡಿಕೊಂಡವರು. ಬೆಳಗ್ಗೆ ಮನೆಯಿಂದ ಅಂಗಡಿಗೆ ಬಂದಿದ್ದ ಪ್ರವೀಣ್ ಶಟರ್ ಮುಚ್ಚಿ ಶಾಲಿನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳದಲ್ಲಿ ಪ್ರವೀಣ್ ಬರೆದಿದ್ದೆನ್ನಲಾದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ, ಅಮ್ಮ, ಪತ್ನಿ ,ಮಗನಲ್ಲಿ ಸಾರಿ’ ಅಂತ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮೃತರು ತಾಯಿ, ಪತ್ನಿ, ಓರ್ವ ಪುತ್ರನನ್ನ ಅಗಲಿದ್ದಾರೆ.ಘಟನಾ ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw