ಚಿಕ್ಕಮಗಳೂರು: ಮೊದಲ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರ ಪೆಂಡಿಂಗ್ | ಬಿಜೆಪಿ ಹಾಲಿ ಶಾಸಕರ ಬದಲಾವಣೆ ಆಗುತ್ತಾ?

ಚಿಕ್ಕಮಗಳೂರು: ಬಿಜೆಪಿಯ ಮೊದಲ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರ ಪೆಂಡಿಂಗ್ ಆಗಿದ್ದು, ಮೂಡಿಗೆರೆಯಲ್ಲಿ ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ವಿರೋಧಿ ಬಣದ ನಡುವಿನ ಫೈಟ್ ಹೈಕಮಾಂಡ್ ಗೆ ತಲೆನೋವು ತರಿಸಿದೆ.
ಕುಮಾರಸ್ವಾಮಿ ಅವರಿಗೆ ಟಿಕೆಟ್ ಬೇಡವೇ ಬೇಡ ಎಂದು ರಸ್ತೆಗಿಳಿದಿದ್ದ ಕಾರ್ಯಕರ್ತರು ಪಕ್ಷದ ಹಿರಿಯ ಮುಖಂಡರ ಸಮ್ಮುಖದಲ್ಲಿ ಭಾರೀ ಪ್ರತಿಭಟನೆ ಕೂಡ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮೂಡಿಗೆರೆ ಅಭ್ಯರ್ಥಿಯ ಆಯ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಚಿಕ್ಕಮಗಳೂರಿನ ಐದು ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಟಿಕೆಟ್ ಘೋಷಣೆಯಾಗಿದೆ.
ಚಿಕ್ಕಮಗಳೂರು — ಸಿ.ಟಿ.ರವಿ
ತರೀಕೆರೆ– ಡಿ.ಎಸ್.ಸುರೇಶ್
ಕಡೂರು–ಬೆಳ್ಳಿ ಪ್ರಕಾಶ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂರು ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ. ಶೃಂಗೇರಿಯಲ್ಲಿ ಮಾಜಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಗೆ ಟಿಕೆಟ್ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw