ವಂಶ ಅಭಿವೃದ್ಧಿ ಬಗ್ಗೆ ಪ್ರಚೋದನಾತ್ಮಕ ಭಾಷಣ: ನಟಿ ಶ್ರುತಿಗೆ ಸಂಕಷ್ಟ
ಹಾವೇರಿ: ಸ್ಯಾಂಡಲ್ವುಡ್ ನಟಿ ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ವಿರುದ್ಧ ದೂರು ದಾಖಲಾಗಿದೆ. ಕಳೆದ ವಾರ ನಟಿ ಶ್ರುತಿ ಹಿರೇಕೇರೂರಿನಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.
ಕಳೆದ ವಾರ ನಟಿ ಶ್ರುತಿ ಸಚಿವ ಬಿ.ಸಿ ಪಾಟೀಲ್ ಪರವಾಗಿ ಹಿರೆಕೇರೂರಿನಲ್ಲಿ ಪ್ರಚಾರ ನಡೆಸಿದ್ದರು. ಈ ವೇಳೆ ನಟಿ ಶ್ರುತಿ ಪಕ್ಷಗಳ ನಡುವೆ ದ್ವೇಷವನ್ನು ಹುಟ್ಟಿಸುವಂತಹ ಭಾಷಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ನಟಿ ಶ್ರುತಿ ವಿರುದ್ಧ ಹಿರೆಕೇರೂರು ಪೊಲೀಸ್ ಠಾಣೆಯಲ್ಲಿ ಕಲಂ 505ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹಿರೇಕೆರೂರು ನೋಡಲ್ ಅಧಿಕಾರಿ ಪಂಪಾಪತಿ ಎಂಬವರು ನಟಿ ಶೃತಿ ವಿರುದ್ಧ ದೂರು ದಾಖಲಿಸಿದ್ದಾರೆ .
ಹಿರೇಕೆರೂರಿನಲ್ಲಿ ಭಾಷಣ ಮಾಡಿದ್ದ ಶ್ರುತಿ ನಿಮ್ಮ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದ್ರೆ ಜೆಡಿಎಸ್ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದ್ರೆ ಕಾಂಗ್ರೆಸ್ಗೆ ಮತ ಹಾಕಿ. ನಿಮ್ಮ ವಂಶದ ಜೊತೆಗೆ ದೇಶದ ಅಭಿವೃದ್ಧಿ ಆಗಬೇಕಾದ್ರೆ ಬಿಜೆಪಿಗೆ ಮತ ಹಾಕಿ ಎಂದು ಹೇಳಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw